ಬ್ರೇಕಿಂಗ್ ನ್ಯೂಸ್
06-06-23 01:10 pm Source: news18 ಕ್ರೀಡೆ
ಏಷ್ಯಾಕಪ್ 2023ರ ಆಯೋಜನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂದರೆ ಪಿಸಿಬಿಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪಿಸಿದ್ದರು. ಆದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗಳು ಹೈಬ್ರಿಡ್ ಮಾದರಿಯನ್ನು ಸ್ವೀಕರಿಸಲು ನಿರಾಕರಿಸಿವೆ. ಈಗ ಪಾಕಿಸ್ತಾನಕ್ಕೆ ಕೇವಲ 2 ಆಯ್ಕೆಗಳು ಮಾತ್ರ ಬಾಕಿ ಉಳಿದವೆ.
ಮೊದಲನೆಯದು ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವುದು ಮತ್ತು ಪಂದ್ಯಾವಳಿಯಿಂದ ಹಿಂದೆ ಸರಿಯುವುದು ಎರಡನೆಯ ಆಯ್ಕೆಯಾಗಿದೆ. ಈ ಹಿಂದೆಯೂ ಪಾಕಿಸ್ತಾನ ಇಲ್ಲದ ಏಷ್ಯಾಕಪ್ ಪಂದ್ಯಗಳು ನಡೆದಿದ್ದವು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, 3 ದೇಶಗಳು ಪಿಸಿಬಿ ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿವೆ. ಈ ಹಿಂದೆ ನಜಮ್ ಸೇಥಿ ಅವರು ಇಡೀ ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವಂತೆ ಕೇಳಿಕೊಂಡಾಗ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತೇವೆ ಎಂದು ಹೇಳಿದ್ದರು.
ಈಗಾಗಲೇ ಪಿಸಿಬಿ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಪಾಕಿಸ್ತಾನದ ಹೊರತಾಗಿ ಯುಎಇಯಲ್ಲಿಯೂ ಟೂರ್ನಿ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಈವರೆಗೂ ಏಷ್ಯಾಕಪ್ ಕುರಿತು ಒಂದು ನಿರ್ಧಿಷ್ಟ ಸ್ಪಷ್ಟನೆ ಸಿಕ್ಕಿಲ್ಲ. ಶ್ರೀಲಂಕಾ ಜೊತೆಗಿನ ಸಂಬಂಧ ಹದಗೆಟ್ಟಿದ್ದು, ಏಷ್ಯಾಕಪ್ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಿದ್ಧವಾಗಿದೆ. ಆತಿಥ್ಯ ವಹಿಸಲು ಶ್ರೀಲಂಕಾ ಮುಂದೆ ಬಂದಿದ್ದಕ್ಕೆ ಕೋಪಗೊಂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ವಿರುದ್ಧದ ಏಕದಿನ ಸರಣಿಯನ್ನು ರದ್ದುಗೊಳಿಸಿದೆ.
ಒಂದು ವೇಳೆ ಪಾಕಿಸ್ತಾನ ಟೂರ್ನಿಯಿಂದ ಹಿಂದೆ ಸರಿದರೆ ಏಷ್ಯಾಕಪ್‌ಗೆ 6ರ ಬದಲಾಗಿ 5 ದೇಶಗಳು ಮಾತ್ರ ಪ್ರವೇಶಿಸಲಿವೆ. ಇದರಲ್ಲಿ ಭಾರತವಲ್ಲದೆ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ನೇಪಾಳ ಕೂಡ ಸ್ಥಾನ ಪಡೆದಿವೆ. ಇದಕ್ಕೂ ಮುನ್ನ 1990-91ರಲ್ಲಿ ಭಾರತದಲ್ಲಿ ನಡೆದ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ತಂಡ ಪ್ರವೇಶಿಸಿರಲಿಲ್ಲ.
Afghanistan Sri Lanka and Bangladesh have Rejected the hybrid model of pakistan for asia cup 2023.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm