ಬ್ರೇಕಿಂಗ್ ನ್ಯೂಸ್
07-06-23 01:33 pm Source: news18 ಕ್ರೀಡೆ
ಕ್ರಿಕೆಟ್ ಅಭಿಮಾನಿಗಳ ಗಮನವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ನ ಫೈನಲ್‌ನತ್ತ ನೆಟ್ಟಿದೆ. ಪ್ರಮುಖ ಐಸಿಸಿ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಹಲವು ವರ್ಷಗಳೇ ಕಳೆದಿವೆ. ಡಬ್ಲ್ಯುಟಿಸಿ ಫೈನಲ್ ಪಂದ್ಯವನ್ನು ಗೆದ್ದು ಆ ಕೊರತೆಯನ್ನು ನೀಗಿಸಿಕೊಳ್ಳುವ ಭರವಸೆಯಲ್ಲಿದೆ. ಓವಲ್‌ನಲ್ಲಿ ಇಂದಿನಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿರುವ ಈ ಪಂದ್ಯಕ್ಕೆ ಅಂತಿಮ ತಂಡದ ಆಯ್ಕೆಯ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಈಗಾಗಲೇ ಒಂದು ತೀರ್ಮಾನಕ್ಕೆ ಬಂದಿದೆಯಂತೆ. ವರದಿಯ ಪ್ರಕಾರ ಅಂತಿಮ-11 ರಲ್ಲಿ ಆಡುವ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ.
ಆರಂಭಿಕರು: ಡಬ್ಲ್ಯುಟಿಸಿ ಫೈನಲ್‌ನಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಯುವ ಆಟಗಾರ ಶುಭ್ಮನ್ ಗಿಲ್ ತೆರೆಯುವ ಸಾಧ್ಯತೆಯಿದೆ. ರೋಹಿತ್ ಶರ್ಮಾ ಐಪಿಎಲ್ 2023ರ ಋತುವಿನಲ್ಲಿ ಹೆಚ್ಚು ಪ್ರಭಾವ ಬೀರಲಿಲ್ಲ. ಟೆಸ್ಟ್ ಆರಂಭಿಕರಾಗಿ ಯಾವುದೇ ದೊಡ್ಡ ದಾಖಲೆಗಳನ್ನು ಹೊಂದಿಲ್ಲ. ಆದರೆ 2021ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ 4 ಟೆಸ್ಟ್‌ಗಳಲ್ಲಿ ರೋಹಿತ್ 368 ರನ್ ಗಳಿಸಿದ್ದರು. ಈ ಸರಣಿಯಲ್ಲಿ ಅವರು ವಿದೇಶಿ ನೆಲದಲ್ಲಿ ಓವಲ್‌ನಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕವನ್ನೂ ಗಳಿಸಿದ್ದರು. ಫಾರ್ಮ್ ಅನ್ನು ಸುಧಾರಿಸಿಕೊಳ್ಳುವುದರ ಜೊತೆಗೆ ನಾಯಕನಾಗಿ ಬ್ಯಾಟಿಂಗ್ ಲೈನ್ ಅಪ್ ಮೇಲೆ ಗಮನ ಕೇಂದ್ರೀಕರಿಸುವುದು ರೋಹಿತ್ ಮುಂದಿರುವ ಸವಾಲು.
ಆದರೆ, ಮತ್ತೊಬ್ಬ ಓಪನರ್ ಆಗಿ ಶುಭಮನ್ ಗಿಲ್ ಅವರ ಆಟದ ಮೇಲೆ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ 12 ತಿಂಗಳುಗಳಲ್ಲಿ, ಗಿಲ್ ಎಲ್ಲಾ ಸ್ವರೂಪಗಳಲ್ಲಿ ಪ್ರಭಾವಶಾಲಿಯಾಗಿದ್ದಾರೆ. ಆದರೆ ಅವರ ಪ್ರತಿಭೆಗೆ ಡಬ್ಲ್ಯುಟಿಸಿ ಫೈನಲ್ ರೂಪದಲ್ಲಿ ದೊಡ್ಡ ಸವಾಲು ಎದುರಾಗಲಿದೆ. ಕಠಿಣ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯದ ಬೌಲಿಂಗ್ ದಾಳಿಯನ್ನು ಗಿಲ್ ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಮಧ್ಯಮ ಕ್ರಮಾಂಕ: ಭಾರತ ತಂಡದ ಮಧ್ಯಮ ಕ್ರಮಾಂಕ ಬಲಿಷ್ಠವಾಗಿ ಕಾಣುತ್ತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಮತ್ತು ರವೀಂದ್ರ ಜಡೇಜಾ ಇದೀಗ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಗಾಯಗೊಂಡಿದ್ದರಿಂದ, ಐಪಿಎಲ್ ಸ್ಟಾರ್ ಅಜಿಂಕ್ಯ ರಹಾನೆ ಪಂದ್ಯಕ್ಕೆ ಆಯ್ಕೆಯಾದರು. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಪೂಜಾರ ಅವರೊಂದಿಗೆ ರಹಾನೆ ಭಾರತದ ಮಧ್ಯಮ ಕ್ರಮಾಂಕವನ್ನು ಬಲಪಡಿಸಿದ್ದಾರೆ. ಕಳೆದೊಂದು ದಶಕದಿಂದ ಈ ಮೂವರು ಆಟಗಾರರು ಭಾರತವನ್ನು ಟೆಸ್ಟ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಗೆಲುವಿನ ದಡಕ್ಕೆ ತಂದಿರುವುದು ಗಮನಾರ್ಹ. ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆಲ್ಲಬೇಕಾದರೆ ಮಧ್ಯಮ ಕ್ರಮಾಂಕದಲ್ಲಿ ಬಲವಾಗಿ ನಿಲ್ಲಬೇಕು.
ರವೀಂದ್ರ ಜಡೇಜಾ ಈಗಾಗಲೇ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ತಮ್ಮ ಕೊನೆಯ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದಲ್ಲದೆ, ಬೌಲಿಂಗ್ನಲ್ಲಿಯೂ ಮಿಂಚಿದ್ದರು. ರೋಹಿತ್ ಒಬ್ಬನೇ ಸ್ಪಿನ್ನರ್ ಜೊತೆ ಕಣಕ್ಕೆ ಇಳಿಯಲು ಒಲವು ತೋರಿರುವ ಹಿನ್ನೆಲೆಯಲ್ಲಿ ಅಶ್ವಿನ್ ಬದಲು ಜಡೇಜಾ ಅಂತಿಮ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ವಿಕೆಟ್ ಕೀಪಿಂಗ್: ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭರತ್ ಆಡಿದ್ದರು. ಆದರೆ, ರೋಹಿತ್ ಶರ್ಮಾ ಭರತ್ ಮೇಲೆ ಹೆಚ್ಚು ನಂಬಿಕೆ ಹೊಂದಿದ್ದಾರೆ. ಈ ಮೂಲಕ ದ್ವಿಶತಕದ ಹೀರೋ ಇಶಾನ್ ಕಿಶನ್ ನಿರಾಸೆ ಎದುರಿಸಲಿದ್ದಾರೆ.
ಬೌಲರ್‌ಗಳು: ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಈ ನಾಲ್ವರ ಜೊತೆ ಭಾರತ ತಂಡದ ಬೌಲಿಂಗ್ ಬಲವೂ ಸೂಪರ್ ಸ್ಟ್ರಾಂಗ್ ಆಗಿ ಕಾಣಿಸುತ್ತಿದೆ. ಶಾರ್ದೂಲ್ ಠಾಕೂರ್ ಕಳೆದ ಕೆಲವು ವರ್ಷಗಳಿಂದ ವಿದೇಶಿ ಟೆಸ್ಟ್‌ಗಳಲ್ಲಿ ಭಾರತ ತಂಡದ ಪರ ಸೀಮ್-ಬೌಲಿಂಗ್ ಆಲ್ ರೌಂಡರ್ ಆಗಿದ್ದಾರೆ.
ಜಯದೇವ್ ಉನದ್ಕತ್ ಗಿಂತ ಉಮೇಶ್ ಗೆ ಮ್ಯಾನೇಜ್ ಮೆಂಟ್ ಅವಕಾಶ ನೀಡಬಹುದು. ಆದರೆ, ಅಂತಿಮ ಇಲೆವೆನ್‌ನಲ್ಲಿ ಸ್ಥಾನ ಪಡೆದಿರುವ ಬೌಲರ್‌ಗಳಾದ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಮೇಲೆ ಹಲವು ನಿರೀಕ್ಷೆಗಳಿವೆ. ಆಸೀಸ್ ಬ್ಯಾಟ್ಸ್ ಮನ್ ಗಳನ್ನು ಹಿಡಿತದಲ್ಲಿಟ್ಟುಕೊಳ್ಳುವಲ್ಲಿ ಶಮಿ ಮತ್ತು ಸಿರಾಜ್ ಪಾತ್ರ ನಿರ್ಣಾಯಕವಾಗಲಿದೆ.
ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ / ಅಶ್ವಿನ್, ಮೊಹಮ್ಮದ್ ಶಮಿ, ಸಿರಾಜ್, ಉಮೇಶ್ ಯಾದವ್.
wtc final 2023 india vs australia match team india predicted playing xi.
26-09-23 08:57 pm
HK News Desk
Bengaluru Bandh, Cauvery water: ಕಾವೇರಿ ಹೋರಾಟ...
26-09-23 05:41 pm
Tumkur Car Accident: ತುಮಕೂರು ; ರಥೋತ್ಸವ ಕಾರ್ಯಕ...
26-09-23 12:37 pm
Hd Kumaraswamy, Bengaluru Bandh Cauvery: ಇದೇನ...
26-09-23 12:28 pm
Bengaluru, City police commissioner, Cauvery...
25-09-23 07:09 pm
26-09-23 07:44 pm
HK News Desk
Goa Deltin Royale Casino GST Notice, 17 thous...
26-09-23 06:32 pm
Kasaragod accident, five dead: ಬದಿಯಡ್ಕ ಬಳಿ ಭೀ...
25-09-23 11:06 pm
Delhi,AIADMK-BJP alliance: ತಮಿಳುನಾಡು ಬಿಜೆಪಿಗೆ...
25-09-23 09:32 pm
Jog falls drowning: ಜೋಗ್ ಫಾಲ್ಸ್ ಸಮೀಪ ದುರಂತ ;...
24-09-23 09:05 pm
26-09-23 02:24 pm
Mangalore Correspondent
Subramanya, illegal cattle Cow trafficking, M...
26-09-23 10:52 am
Mangalore Dinesh Gundu Rao, Janatha Darshana:...
25-09-23 09:38 pm
Mangalore Eid Milad 2023, Banner Fish Bunder:...
25-09-23 06:17 pm
Ullal Suicide, Train Mangalore; ರೈಲಿನಡಿಗೆ ಹಾರ...
25-09-23 05:22 pm
26-09-23 07:20 pm
HK News Desk
Udupi, OTP Fraud, Kapu: ಬ್ಯಾಂಕ್ ಅಧಿಕಾರಿ ಎಂದು...
24-09-23 10:27 pm
Mangalore Rowdy Sheeter Tallat arrested by CC...
20-09-23 11:43 am
ಸುಳ್ಯಕ್ಕೆ ಬಂದಿದ್ದ ಕೊಡಗಿನ ಯುವಕನಿಗೆ ಹಲ್ಲೆಗೈದು ದ...
19-09-23 09:31 pm
Bantwal Robbery: ಬಂಟ್ವಾಳ ; ಹಗಲು ವೇಳೆ ಮನೆಗೆ ನು...
18-09-23 10:59 pm