ಬ್ರೇಕಿಂಗ್ ನ್ಯೂಸ್
03-08-23 04:09 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಇಂದು ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಟೀಂ ಇಂಡಿಯಾ ವಶಪಡಿಸಿಕೊಂಡಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಅನುಭವಿ ಆಟಗಾರರು ಈ ಸರಣಿಯಲ್ಲಿ ಆಯ್ಕೆ ಆಗದ ಕಾರಣದಿಂದಾಗಿ 3 ಆಟಗಾರರು ಟಿ20 ಪಂದ್ಯಗಳಿಗೆ ಪದಾರ್ಪಣೆ ಮಾಡಲಿದ್ದಾರೆ.
ಮುಖೇಶ್ ಕುಮಾರ್, ತಿಲಕ್ ವರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಹೊಸ ಮುಖಗಳಾಗಿ ಟಿ20 ತಂಡವನ್ನು ಸೇರಿಕೊಂಡಿದ್ದಾರೆ. ಈಗ ಈ ಮೂವರಲ್ಲಿ ಯಾರು ಪದಾರ್ಪಣೆ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ. ಒಂದು ವೇಳೆ ಹಾರ್ದಿಕ್ ಪಾಂಡ್ಯ ಯಶಸ್ವಿ ಜೈಸ್ವಾಲ್‌ಗೆ ಓಪನಿಂಗ್ ಮಾಡಲು ಅವಕಾಶ ನೀಡಿದರೆ, ಅವರು ಇಶಾನ್ ಕಿಶನ್ ಅಥವಾ ಶುಭಮನ್ ಗಿಲ್ ಅವರಲ್ಲಿ ಒಬ್ಬರನ್ನು ಕೂರಿಸಬೇಕು. ಮಧ್ಯಮ ಕ್ರಮಾಂಕದಲ್ಲಿ ಭಾರತವು ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರನ್ನು ಹೊಂದಿದ್ದು, ಅವರ ಮುಂದೆ ತಿಲಕ್ ವರ್ಮಾ ಅವರಿಗೆ ಅಷ್ಟೇನೂ ಅವಕಾಶ ಸಿಗುವುದಿಲ್ಲ.
ಟೀಂ ಇಂಡಿಯಾದ ಯುವ ಆಟಗಾರ ಮುಖೇಶ್ ಕುಮಾರ್ ಅವರ ಟೆಸ್ಟ್ ಮತ್ತು ಏಕದಿನ ಚೊಚ್ಚಲ ಪಂದ್ಯ ಅತ್ಯುತ್ತಮವಾಗಿತ್ತು. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 2 ವಿಕೆಟ್ ಉರುಳಿಸಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಅವರು 3 ವಿಕೆಟ್ ಪಡೆದರು. ಇಂತಹ ಪರಿಸ್ಥಿತಿಯಲ್ಲಿ ಅವರು ಮೊದಲ ಟಿ20 ಆಡುವುದು ಖಚಿತ ಎನಿಸುತ್ತಿದೆ.
ಟೀಂ ಇಂಡಿಯಾ ಸಂಭಾವ್ಯ ತಂಡ: ಇಶಾನ್ ಕಿಶನ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ/ಯಶಸ್ವಿ ಜೈಸ್ವಾಲ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್, ಶಾಯ್ ಹೋಪ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್, ಓಶನ್ ಥಾಮಸ್.
IND vs WI these 3 Players Ready for T20 International Debut.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm