ಬ್ರೇಕಿಂಗ್ ನ್ಯೂಸ್
16-08-23 02:38 pm Source: News18 Kannada ಕ್ರೀಡೆ
ಈ ಏಷ್ಯಾ ಕಪ್ ಟೂರ್ನಿಯ ಪಂದ್ಯಗಳನ್ನು ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಆಯೋಜಿಸಲಾಗಿದೆ. ಅತಿಯಾದ ವಿಳಂಬದ ನಂತರ, ಕಾಂಟಿನೆಂಟಲ್ ಪಂದ್ಯಾವಳಿಯ ವೇಳಾಪಟ್ಟಿ ಮತ್ತು ಸ್ಥಳಗಳನ್ನು ಕಳೆದ ತಿಂಗಳು ದೃಢಪಡಿಸಲಾಯಿತು, ಭಾರತವು ತಮ್ಮ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದ ನಂತರ ಎರಡು ದೇಶಗಳಲ್ಲಿ ಪಂದ್ಯಗಳನ್ನು ಆಡಿಸಲಾಗುತ್ತಿದೆ.
ನೆಟ್ಸ್ ನಲ್ಲಿ ಅಭ್ಯಾಸ ಮಾಡ್ತಿದ್ದ ಕೆ ಎಲ್ ರಾಹುಲ್ ಮತ್ತು ಬುಮ್ರಾ
ಇನ್ನೂ ಈ ಏಷ್ಯಾ ಕಪ್ ಟೂರ್ನಿ ಮುಗಿದ ನಂತರ ಅಕ್ಟೋಬರ್ ತಿಂಗಳಲ್ಲಿ ಏಕದಿನ ಪಂದ್ಯಗಳ ವಿಶ್ವಕಪ್ ನಡೆಯಲಿದೆ. ಭಾರತ ತಂಡದ ಆರಂಭಿಕ ಆಟಗಾರ ಕೆ ಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಫಿಟ್ನೆಸ್ ಕುರಿತು ಅನೇಕ ಊಹಾಪೋಹಗಳು ಹಬ್ಬಿದ್ದು, ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಹರಿದಾಡಲು ಶುರು ಮಾಡಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ನೆಟ್ಸ್ ನಲ್ಲಿ ಎಲ್ಎಸ್‌ಜಿ ನಾಯಕ ಕೆ ಎಲ್ ರಾಹುಲ್ ಅವರಿಗೆ ವೇಗಿ ಜಸ್ಪ್ರೀತ್ ಬುಮ್ರಾ ಅವರು ಬೌಲಿಂಗ್ ಮಾಡುವುದನ್ನು ನಾವು ನೋಡಬಹುದು.
ಏಷ್ಯಾ ಕಪ್ ಮತ್ತು ಏಕದಿನ ಅಂತಾರಾಷ್ಟ್ರೀಯ ವಿಶ್ವಕಪ್ ಅನ್ನು ಒಳಗೊಂಡ ಮುಂಬರುವ ಋತುವಿನಲ್ಲಿ ಬುಮ್ರಾ ಮತ್ತು ರಾಹುಲ್ ಇಬ್ಬರನ್ನೂ ನೋಡಲು ಬಯಸುವ ಅಭಿಮಾನಿಗಳಿಗೆ ಇದು ಖುಷಿ ಕೊಡುವ ವೀಡಿಯೋವಾಗಿದೆ ಅಂತ ಹೇಳಬಹುದು.
ಈ ಇಬ್ಬರೂ ಕ್ರಿಕೆಟಿಗರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇದುವರೆಗೆ ತಂಡದಿಂದ ಹೊರಗುಳಿದಿದ್ದರು, ಆದರೆ ಈಗ ಅವರು ಚೇತರಿಸಿಕೊಂಡಿದ್ದಾರೆ ಮತ್ತು ತಂಡವನ್ನು ಸೇರಿಕೊಳ್ಳಲಿದ್ದಾರೆ ಅಂತ ಈ ವೀಡಿಯೋ ಒಂದು ಬಲವಾದ ಸೂಚನೆಯನ್ನು ನೀಡುವಂತಿದೆ. ವರದಿಗಳ ಪ್ರಕಾರ ಈ ವಾರ ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗುವುದು.
ಏಕದಿನ ಅಂತಾರಾಷ್ಟ್ರೀಯ ವಿಶ್ವಕಪ್ ನಲ್ಲಿ ಸ್ಥಾನ ಪಡಿತಾರಾ ಶ್ರೇಯಸ್ ಅಯ್ಯರ್?
ಭಾರತೀಯ ಕ್ರಿಕೆಟ್ ತಂಡಕ್ಕೆ ಇನ್ನೊಂದು ದೊಡ್ಡ ಖುಷಿಯ ವಿಚಾರ ಏನೆಂದರೆ ಭಾರತದ ಏಕದಿನ ಅಂತಾರಾಷ್ಟ್ರೀಯ ವಿಶ್ವಕಪ್ 2023 ಯೋಜನೆಗಳಿಗೆ ಸ್ಟಾರ್ ಬ್ಯಾಟರ್ ಆದ ಶ್ರೇಯಸ್ ಅಯ್ಯರ್ ಸ್ಥಾನ ಪಡಿತಾರಾ ಅಂತ ಕಾದು ನೋಡಬೇಕಿದೆ.
ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇಬ್ಬರು ಇತ್ತೀಚೆಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ನೆಟ್ಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರಂತೆ. ಈ ಇಬ್ಬರು ಬಲಗೈ ಬ್ಯಾಟರ್‌ಗಳು ಸ್ವಲ್ಪ ಸಮಯದವರೆಗೆ ಕ್ರಿಕೆಟ್ ನಿಂದ ಹೊರಗುಳಿದಿದ್ದಾರೆ.
ಅಯ್ಯರ್ ಮತ್ತು ರಾಹುಲ್ ಇಬ್ಬರೂ ಆಡುವಾಗ ಗಾಯಗೊಂಡ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇವರಿಬ್ಬರು 2023 ರ ಏಕದಿನ ಅಂತಾರಾಷ್ಟ್ರೀಯ ವಿಶ್ವಕಪ್‌ನಲ್ಲಿ ಆಡುವುದು ಡೌಟ್ ಅಂತ ಊಹಿಸಲಾಗಿತ್ತು. ಆದರೆ ಅವರ ಇತ್ತೀಚಿನ ಬ್ಯಾಟಿಂಗ್ ವೀಡಿಯೋ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ವಿಶ್ವಕಪ್ ಗೆ ಅವರ ಲಭ್ಯತೆಯ ಭರವಸೆಯನ್ನು ಹೆಚ್ಚಿಸಿದೆ.
ಟೀಮ್ ಇಂಡಿಯಾದ ಮೊದಲ ಆಯ್ಕೆಯ ವಿಕೆಟ್‌ಕೀಪರ್ ಕೆಎಲ್ ರಾಹುಲ್ ಮತ್ತು ಏಕದಿನ ಪಂದ್ಯಗಳಲ್ಲಿ ನಾಲ್ಕನೇ ಸ್ಥಾನದಲ್ಲಿ ಬ್ಯಾಟ್ ಮಾಡುವ ಸ್ಟಾರ್ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಆಗಿರುತ್ತಾರೆ.
ಈ ಇಬ್ಬರು ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಲು ಎನ್‌ಸಿಎ ಗೆ ಬಂದಿಳಿದಿದ್ದಾರೆ. ರಾಹುಲ್ ಮತ್ತು ಅಯ್ಯರ್ ಮತ್ತೊಮ್ಮೆ ಫಿಟ್ ಎಂದು ಘೋಷಿಸಿದರೆ, ಅವರು ಮುಂಬರುವ 2023 ರ ಏಷ್ಯಾ ಕಪ್ ಪಂದ್ಯಾವಳಿಗೆ ಖಂಡಿತವಾಗಿಯೂ ಆಯ್ಕೆಯಾಗುತ್ತಾರೆ ಎನ್ನಲಾಗುತ್ತಿದೆ.
Asia Cup 2023 will Rahul and Bumrah make a Comeback for Team India Net Practice Video Viral.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm