ಬ್ರೇಕಿಂಗ್ ನ್ಯೂಸ್
21-08-23 01:23 pm Source: News18 Kannada ಕ್ರೀಡೆ
ಆಗಸ್ಟ್ ಕೊನೆಯ ವಾರದಿಂದ ಕ್ರಿಕೆಟ್ ಜ್ವರ ಶುರುವಾಗಲಿದೆ. ಏಷ್ಯಾ ಕಪ್ 2023 (Asia Cup 2023) ಮತ್ತು ಏಕದಿನ ವಿಶ್ವಕಪ್ 2023 (ODI World cup 2023) ಬ್ಯಾಕ್ ಟು ಬ್ಯಾಕ್ ಇರುವುದುರ ಕ್ರಿಕೆಟ್ ಅಭಿಮಾನಿಗಳು ಪಾಲಿಗೆ ಹಬ್ಬದಂತಾಗಿದೆ. ಏಷ್ಯಾ ಕಪ್ ಆಗಸ್ಟ್ 30 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಎರಡು ವಾರಗಳ ವಿರಾಮದ ನಂತರ ಏಕದಿನ ವಿಶ್ವಕಪ್ ಆರಂಭವಾಗಲಿದೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ.
ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಪಾಕಿಸ್ತಾನದ ಮಾಜಿ ಆಟಗಾರ ಬಸಿತ್ ಅಲಿ ಟೀಂ ಇಂಡಿಯಾ ಬಗ್ಗೆ ಕುತೂಹಲಕಾರಿ ಕಾಮೆಂಟ್ ಮಾಡಿದ್ದಾರೆ. ಭಾರತ ಪಾಕಿಸ್ತಾನಕ್ಕಿಂತ ದುರ್ಬಲವಾಗಿದೆ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಸಂಪೂರ್ಣವಾಗಿ ಮೂವರು ಆಟಗಾರರ ಮೇಲೆ ಅವಲಂಬಿತವಾಗಿದೆ. ಈ ಮೂವರು ಔಟಾದರೆ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನಲ್ಲಿ ಭಾರತ ಗೆಲ್ಲುವುದು ಕಷ್ಟ ಎಂದಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್‌ನ ವೇದಿಕೆಯಲ್ಲಿ ಮಾತನಾಡಿದ ಬಸಿತ್ ಅಲಿ, ಭಾರತ ಮತ್ತು ಪಾಕಿಸ್ತಾನಿ ತಂಡಗಳ ಸಾಮರ್ಥ್ಯಗಳನ್ನು ವಿಶ್ಲೇಷಿಸಿದ್ದಾರೆ. ಈ ಕ್ರಮದಲ್ಲಿ ಟೀಂ ಇಂಡಿಯಾದ ಸಂಪೂರ್ಣ ಬ್ಯಾಟಿಂಗ್ ಶುಭಮನ್ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ಅವಲಂಬಿತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಸದ್ಯ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ತೀರಾ ದುರ್ಬಲವಾಗಿದೆ. ಗಾಯಗಳ ಸಮಸ್ಯೆ ಕೂಡ ಅವರನ್ನು ಕಾಡುತ್ತಿದೆ. ಪಾಕಿಸ್ತಾನದ ಅಗ್ರ ಕ್ರಮಾಂಕವು ಬಾಬರ್ ಅಜಮ್, ಫಕರ್ ಜಮಾನ್, ಇಮಾಮ್-ಉಲ್-ಹಕ್ ಮತ್ತು ಮೊಹಮ್ಮದ್ ರಿಜ್ವಾನ್ ಅವರೊಂದಿಗೆ ಪ್ರಬಲವಾಗಿದೆ. ಇಫ್ತಿಕರ್, ಸಲ್ಮಾನ್ ಅಲಿ, ಶಾದಾಬ್ ಖಾನ್ ಮತ್ತು ಮೊಹಮ್ಮದ್ ನವಾಜ್ ಅವರೊಂದಿಗೆ ಮಧ್ಯಮ ಕ್ರಮಾಂಕದ ಜೊತೆಗೆ ಕೆಳ ಕ್ರಮಾಂಕವೂ ಬಲಿಷ್ಠವಾಗಿದೆ. ಆದರೆ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕವನ್ನು ನೋಡಿದರೆ ಮಧ್ಯಮ ಕ್ರಮಾಂಕ ತೀರಾ ದುರ್ಬಲವಾಗಿದೆ ಎಂದು ಅಲಿ ವಿಶ್ಲೇಷಿಸಿದ್ದಾರೆ.
5ನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಹೇಗೆ ಬ್ಯಾಟಿಂಗ್ ಮಾಡುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ.ಕೆಎಲ್ ರಾಹುಲ್ ಸ್ಥಿತಿಯೂ ತೀರಾ ಕಳಪೆಯಾಗಿದೆ. ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ. ಏನೇ ಆಗಲಿ ಇದೀಗ ಭಾರತಕ್ಕಿಂತ ಪಾಕಿಸ್ತಾನ ಬಲಿಷ್ಠವಾಗಿ ಕಾಣುತ್ತಿದೆ ಎಂದಿದ್ದಾರೆ. ಭಾರತ ಸಂಪೂರ್ಣವಾಗಿ ಗಿಲ್, ರೋಹಿತ್ ಹಾಗೂ ಕೊಹ್ಲಿ ಮೇಲೆ ಅವಲಂಬಿತವಾಗಿದೆ ಎಂದಿರುವ ಬಸಿಲ್ ಅಲಿ, ಅವರು ಸಿಡಿದೆದ್ದರೆ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ವಿಫಲವಾದರೆ ಟೀಂ ಇಂಡಿಯಾವನ್ನು ಸುಲಭವಾಗಿ ಸೋಲಿಸಬಹುದು ಎಂದು ಕಾಮೆಂಟ್ ಮಾಡಿದ್ದಾರೆ.
Former Pakistan Cricketer Basit Ali said that they have a Better Middle Order than India in Asia Cup and ODI World Cup.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm