ಬ್ರೇಕಿಂಗ್ ನ್ಯೂಸ್
29-08-23 02:00 pm Source: News18 Kannada ಕ್ರೀಡೆ
2023 ಏಷ್ಯಾ ಕಪ್ ಆಗಸ್ಟ್ 30 ರಿಂದ ಪ್ರಾರಂಭವಾಗುತ್ತದೆ. ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ. ಏಕದಿನ ವಿಶ್ವಕಪ್‌ಗೂ ಮುನ್ನ ಏಷ್ಯಾಕಪ್ ಗೆದ್ದು ತನ್ನ ಕೀರ್ತಿಯನ್ನು ಹೆಚ್ಚಿಸಿಕೊಳ್ಳಲು ಟೀಂ ಇಂಡಿಯಾ ಬಯಸುತ್ತಿದೆ. ಆದರೆ, ಏಕದಿನ ಏಷ್ಯಾಕಪ್‌ನಲ್ಲಿ ಭಾರತದ ಬೌಲರ್‌ಗಳ ದಾಖಲೆ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ. ಇದುವರೆಗೆ ಭಾರತದ ಒಬ್ಬ ಬೌಲರ್ ಮಾತ್ರ ಏಕದಿನ ಏಷ್ಯಾಕಪ್ ಪಂದ್ಯವೊಂದರಲ್ಲಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ ಎನ್ನುವುದು ಅಚ್ಚರಿಯ ಸಂಗತಿ.
ಭಾರತದ ಬೌಲರ್ ಅರ್ಷದ್ ಅಯೂಬ್ 35 ವರ್ಷಗಳ ಹಿಂದೆ 1988 ರಲ್ಲಿ ಭಾರತದ ಪರ ಏಕದಿನ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಪಂದ್ಯದಲ್ಲಿ ಅರ್ಷದ್ ಪಾಕ್ ವಿರುದ್ಧ 9 ಓವರ್ ಗಳಲ್ಲಿ 21 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ಆ ಪಂದ್ಯವನ್ನು ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದಿತ್ತು. ಅರ್ಷದ್ ಏಷ್ಯಾಕಪ್‌ನಲ್ಲಿ ಐದು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅಲ್ಲಿಂದ ಇಲ್ಲಿಯವರೆಗೆ ಭಾರತದ ಯಾವೊಬ್ಬ ಬೌಲರ್ ಏಕದಿನ ಏಷ್ಯಾಕಪ್‌ನಲ್ಲಿ 5 ವಿಕೆಟ್ ಪಡೆದಿಲ್ಲ.
ಸ್ವಿಂಗ್ ಕಿಂಗ್ ಭುವನೇಶ್ವರ್ ಕುಮಾರ್ 5 ವಿಕೆಟ್ ಪಡೆದಿದ್ದಾರೆ. ಆದರೆ ಅದು ಟಿ20 ಏಷ್ಯಾಕಪ್‌ನಲ್ಲಿ ಎಂಬುದು ಗಮನಾರ್ಹ. ಅವರು ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ ಏಕದಿನ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ಐದು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅವರು ಮೂರು ಬಾರಿ ಈ ಸಾಧನೆ ಮಾಡಿದ್ದಾರೆ. ಒಟ್ಟು 9 ಬೌಲರ್‌ಗಳು ಏಕದಿನ ಏಷ್ಯಾಕಪ್‌ನಲ್ಲಿ 5 ವಿಕೆಟ್ ಪಡೆದಿದ್ದಾರೆ.
ಲಸಿತ್ ಮಾಲಿಂಗ (ಶ್ರೀಲಂಕಾ) - 3 ಬಾರಿ , ಅಜಂತಾ ಮೆಂಡಿಸ್ (ಶ್ರೀಲಂಕಾ) - 2 ಬಾರಿ , ಅರ್ಷದ್ ಅಯೂಬ್ (ಭಾರತ) - 1 ಬಾರಿ,ಅಕಿಬ್ ಜಾವೇದ್ (ಪಾಕಿಸ್ತಾನ) - 1 ಬಾರಿ, ಸಕ್ಲೈನ್ ಮುಷ್ತಾಕ್ (ಪಾಕಿಸ್ತಾನ) - 1 ಬಾರಿ, ಸೊಹೈಲ್ ತನ್ವೀರ್ (ಪಾಕಿಸ್ತಾನ) - 1 ಬಾರಿ , ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ) - 1 ಬಾರಿ, ಪರ್ವೇಜ್ ಮಹರೂಫ್ (ಶ್ರೀಲಂಕಾ) - 1 ಬಾರಿ, ತಿಸಾರಾ ಪೆರೇರಾ (ಶ್ರೀಲಂಕಾ) - 1 ಬಾರಿ 5 ವಿಕೆಟ್ ಪಡೆದಿದ್ದಾರೆ.
Arshad Ayub only Indian Bowler to take 5 Wickets Haul in ODI Asia Cup.
26-09-23 08:57 pm
HK News Desk
Bengaluru Bandh, Cauvery water: ಕಾವೇರಿ ಹೋರಾಟ...
26-09-23 05:41 pm
Tumkur Car Accident: ತುಮಕೂರು ; ರಥೋತ್ಸವ ಕಾರ್ಯಕ...
26-09-23 12:37 pm
Hd Kumaraswamy, Bengaluru Bandh Cauvery: ಇದೇನ...
26-09-23 12:28 pm
Bengaluru, City police commissioner, Cauvery...
25-09-23 07:09 pm
26-09-23 07:44 pm
HK News Desk
Goa Deltin Royale Casino GST Notice, 17 thous...
26-09-23 06:32 pm
Kasaragod accident, five dead: ಬದಿಯಡ್ಕ ಬಳಿ ಭೀ...
25-09-23 11:06 pm
Delhi,AIADMK-BJP alliance: ತಮಿಳುನಾಡು ಬಿಜೆಪಿಗೆ...
25-09-23 09:32 pm
Jog falls drowning: ಜೋಗ್ ಫಾಲ್ಸ್ ಸಮೀಪ ದುರಂತ ;...
24-09-23 09:05 pm
26-09-23 02:24 pm
Mangalore Correspondent
Subramanya, illegal cattle Cow trafficking, M...
26-09-23 10:52 am
Mangalore Dinesh Gundu Rao, Janatha Darshana:...
25-09-23 09:38 pm
Mangalore Eid Milad 2023, Banner Fish Bunder:...
25-09-23 06:17 pm
Ullal Suicide, Train Mangalore; ರೈಲಿನಡಿಗೆ ಹಾರ...
25-09-23 05:22 pm
26-09-23 07:20 pm
HK News Desk
Udupi, OTP Fraud, Kapu: ಬ್ಯಾಂಕ್ ಅಧಿಕಾರಿ ಎಂದು...
24-09-23 10:27 pm
Mangalore Rowdy Sheeter Tallat arrested by CC...
20-09-23 11:43 am
ಸುಳ್ಯಕ್ಕೆ ಬಂದಿದ್ದ ಕೊಡಗಿನ ಯುವಕನಿಗೆ ಹಲ್ಲೆಗೈದು ದ...
19-09-23 09:31 pm
Bantwal Robbery: ಬಂಟ್ವಾಳ ; ಹಗಲು ವೇಳೆ ಮನೆಗೆ ನು...
18-09-23 10:59 pm