ಬ್ರೇಕಿಂಗ್ ನ್ಯೂಸ್
05-11-23 10:54 pm HK News Desk ಕ್ರೀಡೆ
ಕೊಲ್ಕತ್ತಾ, ನ.5: ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅಜೇಯ ದಾಖಲೆ ಮುಂದುವರಿಸಿದ್ದು ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಎಂಟನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. 2007ರ ನಂತರ ವಿಶ್ವಕಪ್ನಲ್ಲಿ ಸತತ 8ನೇ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ತನ್ನ 35ನೇ ವರ್ಷದ ಹುಟ್ಟಿದ ದಿನದಂದೇ ವಿಶ್ವದಾಖಲೆಯ 49ನೇ ಶತಕ ಪೂರೈಸಿದ್ದಾರೆ. ಆಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಈ ಹಿಂದೆ 2007ರ ವಿಶ್ವಕಪ್ನಲ್ಲಿ ಸತತ 8 ಪಂದ್ಯ, 2015ರ ವಿಶ್ವಕಪ್ನಲ್ಲಿ ಸತತ 7 ಪಂದ್ಯಗಳನ್ನು ಭಾರತ ಗೆದ್ದ ಇತಿಹಾಸ ಇತ್ತು. ಈ ಬಾರಿಯೂ ಭಾರತೀಯರು ಸತತ 8ನೇ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ದ. ಆಫ್ರಿಕಾ ಟೂರ್ನಿಯಲ್ಲಿ 2ನೇ ಬಾರಿಗೆ ಸೋಲುಂಡಿದೆ.
327 ರನ್ ಬೆನ್ನಟ್ಟಿದ ಸೌತ್ ಆಫ್ರಿಕಾ 27.1 ಓವರ್ಗಳಲ್ಲಿ 83 ರನ್ಗಳಿಗೆ ಆಲೌಟ್ ಆಯಿತು. ಹರಿಣಗಳ ಪರ ಮಾರ್ಕೋ ಜಾನ್ಸನ್ 14 ರನ್ ಗಳಿಸಿದ್ದೇ ಗರಿಷ್ಠ ಸ್ಕೋರ್. 5 ವಿಕೆಟ್ ಪಡೆದು ಮಿಂಚಿದ ರವೀಂದ್ರ ಜಡೇಜಾ, ಹರಿಣಗಳ ಬಲಿಷ್ಠ ಬ್ಯಾಟ್ಸ್ ಮನ್ ಗಳನ್ನು ಧೂಳೀಪಟ ಮಾಡಿದರು. ಮೊಹಮ್ಮದ್ ಶಮಿ, ಕುಲ್ದೀಪ್ ತಲಾ 2 ವಿಕೆಟ್, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಪಡೆ ಹರಿಣಗಳ ಬೌಲಿಂಗ್ ದಾಳಿಯನ್ನು ಚಚ್ಚಿ ಹಾಕಿದ್ದಾರೆ. ಕೊಹ್ಲಿ ಶತಕ ಮತ್ತು ಶ್ರೇಯಸ್ ಅಯ್ಯರ್ 77 ರನ್ಗಳ ಭರ್ಜರಿ ರನ್ ತಂಡವನ್ನು 300 ರನ್ಗಳ ಗಡಿ ದಾಟಿಸಿತ್ತು. ವಿರಾಟ್ ಕೊಹ್ಲಿ ಅಜೇಯ 101 ರನ್ ಬಾರಿಸಿ, 50 ಓವರ್ಗಳಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 326 ರನ್ ಕಲೆ ಹಾಕಿತ್ತು. ವಿರಾಟ್ ಮತ್ತು ಶ್ರೇಯಸ್ ಅಯ್ಯರ್ 3ನೇ ವಿಕೆಟ್ಗೆ 134 ರನ್ ಬಾರಿಸಿದ್ದರು. ಅಯ್ಯರ್ ವೇಗದ ಆಟಕ್ಕೆ ಹೋಗಿ ಔಟಾದರೆ, ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು. ಕೊನೆಯಲ್ಲಿ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 29 ರನ್ ಸಿಡಿಸಿದ್ದು ತಂಡ ದೊಡ್ಡ ಮೊತ್ತ ಪೇರಿಸುವಲ್ಲಿ ಕೊಡುಗೆ ಕೊಟ್ಟರು.
Rohit Sharma-led Team India continued their supreme run at the ongoing World Cup and defeated South Africa by 243 runs at Eden Gardens, Kolkata on Sunday. Ravindra Jadeja was the architect behind India's splendid show with ball as he completed a five-wicket haul. Riding on his effort, India folded South Africa for 83 in 27.1 overs after handing them a stiff target of 327.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm