ಬ್ರೇಕಿಂಗ್ ನ್ಯೂಸ್
10-12-20 03:14 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿಯ ಓವರ್‌ಗಳ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತ ಪ್ರದರಶನವನ್ನು ನೀಡಿದ್ದಾರೆ. ಏಕದಿನದ ಬಳಿಕ ಅಂತಿಮ ಟಿ20 ಪಂದ್ಯದಲ್ಲೂ ಮ್ಯಾಕ್ಸ್‌ವೆಲ್ ಅಬ್ಬರದ ಪ್ರದರ್ಶನ ನೀಡಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ರಾಷ್ಟ್ರೀಯ ತಂಡದ ಪರವಾಗಿ ಮ್ಯಾಕ್ಸ್‌ವೆಲ್ ನೀಡಿದ ಈ ಪ್ರದರ್ಶನ ಐಪಿಎಲ್ ಅಭಿಮಾನಿಗಳನ್ನು ಕೆರಳಿಸಿದೆ. ಇದಕ್ಕೆ ಕಾರಣ ಮ್ಯಾಕ್ಸ್‌ವೆಲ್ ಐಪಿಎಲ್‌ನಲ್ಲಿ ನೀಡಿದ ಕಳಪೆ ಪ್ರದರ್ಶನ. ಆಡಿದ 13 ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್ 100ರ ಗಡು ದಾಟಲಷ್ಟೇ ಶಕ್ತರಾಗಿದ್ದರು. ಇಡೀ ಟೂರ್ನಿಯಲ್ಲಿ ಮ್ಯಾಕ್ಸ್‌ವೆಲ್ ಬ್ಯಾಟ್‌ನಿಂದ ಒಂದೇ ಒಂದು ಸಿಕ್ಸರ್ ಸಿಡಿದಿರಲಿಲ್ಲ. ಇದಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಹರಿಹಾಯ್ದಿದ್ದಾರೆ.

ಪಂಜಾಬ್ ತಂಡದ ಮಾಜಿ ಕೋಚ್ ಸೆಹ್ವಾಗ್
ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಜಿ ಕೋಚ್ ಆಗಿರುವ ವಿರೇಂದ್ರ ಸೆಹ್ವಾಗ್ ಮ್ಯಾಕ್ಸ್‌ವೆಲ್ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮ್ಯಾಕ್ಸ್‌ವೆಲ್ ಯಾವುದೇ ರೀತಿಯಲ್ಲೂ ಒತ್ತಡವನ್ನು ತೆಗೆದುಕೊಳ್ಳಲು ಬಯಸಿರಲಿಲ್ಲ. ಇದು ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿನ ಮ್ಯಾಕ್ಸ್‌ವೆಲ್ ಪ್ರದರ್ಶನದ ವ್ಯತ್ಯಾಸಕ್ಕೆ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.

ಗಾಲ್ಫ್ ಮೇಲೆ ಪ್ರಾಶಸ್ತ್ಯ
ಮುಂದುವರಿರುವು ಮಾತನಾಡಿದ ವೀರೇಂದ್ರ ಸೆಹ್ವಾಗ್ ಐಪಿಎಲ್ ಸಂದರ್ಭದಲ್ಲಿ ಮ್ಯಾಕ್ಸ್‌ವೆಲ್ ಕ್ರಿಕೆಟ್‌ಗಿಂತಲೂ ಹೆಚ್ಚಾಗಿ ಗಾಲ್ಫ್ ಕಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದು ಆತನ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು ಎಂದು ಸೆಹ್ವಾಗ್ ಹೇಳಿಕೆಯನ್ನು ನೀಡಿದ್ದಾರೆ.

ಗಂಭೀರನಾಗಿದ್ದರೆ ಪ್ರದರ್ಶನದಲ್ಲಿ ವ್ಯಕ್ತವಾಗಬೇಕಿತ್ತು
"ಆತ ಆಟದ ಬಗ್ಗೆ ಗಂಭೀರನಾಗಿದ್ದಾನೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ಆತ ಐಪಿಎಲ್‌ಗೆ ಬಂದ ಸಂದರ್ಭದಲ್ಲಿ ಕ್ರಿಕೆಟ್‌ಗಿಂತಲೂ ಹೆಚ್ಚಾಗಿ ಗಾಲ್ಫ್ ಮೇಲೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ. ಯಾಕೆಂದರೆ ನೀವು ಗಂಭೀರನಾಗಿರುತ್ತಿದ್ದರೆ ಅದು ಪ್ರದರ್ಶನದಲ್ಲಿ ಕಾಣಿಸಬೇಕಿತ್ತು" ಎಂದು ಸೆಹ್ವಾಗ್ ಹರಿಹಾಯ್ದಿದ್ದಾರೆ.
This News Article is a Copy of MYKHEL
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm