ಪೂಜಾರ ಮತ್ತೆ ಲಯಕ್ಕೆ ಮರಳಲು ಸಮಯ ತೆಗೆದುಕೊಳ್ಳಬಹುದು: ಲಕ್ಷ್ಮಣ್

14-12-20 04:10 pm       Source: MYKHEL Madhukara Shetty   ಕ್ರೀಡೆ

ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವಿದ್ದ ಕಾರಣ ಟೀಮ್ ಇಂಡಿಯಾದ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ್ ಪೂಜಾರ ತಮ್ಮ ಎಂದಿನ ಲಯವನ್ನು ಕಂಡುಕೊಳ್ಳಲು ಅವರು ಸ್ವಲ್ಪ ಸಮಯವನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಸುದೀರ್ಘ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವಿದ್ದ ಕಾರಣ ಟೀಮ್ ಇಂಡಿಯಾದ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ್ ಪೂಜಾರ ತಮ್ಮ ಅತ್ಯುತ್ತಮ ಲಯವನ್ನು ಕಂಡುಕೊಳ್ಳಲು ಸಮಯ ತೆಗೆದುಕೊಳ್ಳಬಹುದು ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್‌ನ ಗೇಮ್‌ಪ್ಲಾನ್ ಕಾರ್ಯಕ್ರಮದಲ್ಲಿ ವಿವಿಎಸ್ ಲಕ್ಷ್ಮಣ್ ಸುನಿಲ್ ಗವಾಸ್ಕರ್ ಜೊತೆಗೆ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದಿಗ್ಗಜ ಕ್ರಿಕೆಟಿಗರು ತಮ್ಮ ಅಭುಪ್ರಾಯಗಳನ್ನು ವ್ತಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಹುನಿರೀಕ್ಷಿತ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಪೂಜಾರ ಅವರ ಫಾರ್ಮ್‌ ಬಗ್ಗೆ ಇಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಳೆದ ಮಾರ್ಚ್‌ನ ಬಳಿಕ ಪೂಜಾರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಪಾಲ್ಗೊಂಡಿಲ್ಲ. ಹೀಗಾಗಿ ತಮ್ಮ ಎಂದಿನ ಲಯವನ್ನು ಕಂಡುಕೊಳ್ಳಲು ಅವರು ಸ್ವಲ್ಪ ಸಮಯವನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಲಕ್ಷಣ್ ಲಾಕ್‌ಡೌನ್ ಸಂದರ್ಭದಲ್ಲಿ ಪೂಜಾರ ಆಟದಿಂದ ದೂರವಿದ್ದರೂ ಆಟಕ್ಕೆ ಪೂರಕವಾಗಿ ಆ ಸಮಯದಲ್ಲಿ ಸಾಕಷ್ಟು ಉತ್ತಮ ಸಮಯವನ್ನು ಹೊಂದಿರುತ್ತಾರೆ ಎಂದಿದ್ದಾರೆ. ಮತ್ತೊಂದೆಡೆ ಸುನಿಲ್ ಗವಾಸ್ಕರ್ ಪೂಜಾರ ಸುದೀರ್ಘ ಕಾಲ ಕ್ರಿಕೆಟ್‌ನಿಂದ ದೂರುಳಿದರೂ ಅದು ಪೂಜಾರ ಬ್ಯಾಟಿಂಗ್ ಪ್ರದರ್ಶನದ ಮೇಲೆ ಹೆಚ್ಚಿನ ಪರಿಣಾಮ ಬೀರದು ಎಂದಿದ್ದಾರೆ. ಆತ ಮಾನಸಿಕವಾಗಿ ಸಾಕಷ್ಟು ಬಲಿಷ್ಠವಾಗಿದ್ದು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉನ್ನತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ.

ಆತ ಬ್ಯಾಟಿಂಗ್ ಮಾಡಲು ಇಷ್ಟಪಡುತ್ತಾನೆ. ಆತ ಕ್ರೀಸ್‌ನಲ್ಲಿ ಸುದೀರ್ಘ ಕಾಲ ಇರುವುದನ್ನು ಬಯಸುತ್ತಾನೆ. ಆತ ಬೌಲರ್‌ಗಳನ್ನು ದಂಡಿಸಲು ಇಷ್ಟಪಡುತ್ತಾನೆ. ಕಳೆದ ಎರಡು ವರ್ಷಗಳಲ್ಲಿ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಕೂಡ ಆತ ವಿಸ್ತರಣೆ ಮಾಡಿಕೊಂಡಿದ್ದಾನೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

This News Article is a Copy of MYKHEL