ಬ್ರೇಕಿಂಗ್ ನ್ಯೂಸ್
18-12-20 02:44 pm Source: MYKHEL ಕ್ರೀಡೆ
ಕೆಎಲ್ ರಾಹುಲ್ ಕಳೆದ ಎರಡ್ಮೂರು ವರ್ಷಗಳಿಂದ ಭಾರತದ ಪ್ರಮುಖ ಬ್ಯಾಟ್ಸ್‌ಮನ್ ಆಗಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ರಾಹುಲ್ ತಂಡದ ಮುಖ್ಯ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂಡಕ್ಕೆ ಅನುಕೂಲವಾಗುವ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲು ಶಕ್ತವಾಗಿರುವ ರಾಹುಲ್ ನಾಯಕ ವಿರಾಟ್ ಕೊಹ್ಲಿಗೆ ಆಪತ್ಬಾಂಧವನಂತಾಗಿದ್ದಾರೆ. ಆರಂಭಿಕನಾಗಿ ಕಣ್ಕಕಿಳಿಯುವುದರಿಂದ ಹಿಡಿದು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲು ಕೂಡ ರಾಹುಲ್ ಸೈ ಎನಿಸಿಕೊಂಡಿದ್ದಾರೆ. 2020 ಕೆಎಲ್ ರಾಹುಲ್ ಪರವಾಗಿ ಕೆಎಲ್ ರಾಹುಲ್‌ಗೆ ಹೆಚ್ಚು ಸ್ಮರಣೀಯ ವರ್ಷವೆನಿಸಿಕೊಂಡಿದೆ. ಅದಕ್ಕೆ ಕಾರಣ ರಾಹುಲ್ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನೀಡಿದ ಅದ್ಭುತ ಪ್ರದರ್ಶನ.
ಈ ವರ್ಷದ ಬಹುತೇಕ ಕೊರೊನಾ ವೈರಸ್‌ನ ಕಾರಣದಿಂದಾಗಿ ಕಳೆದುಹೋದರೂ ಇದ್ದ ಅವಕಾಶದಲ್ಲಿ ರಾಹುಲ್ ಟೀಮ್ ಇಂಡಿಯಾ ಪರವಾಗಿ ಶ್ರೇಷ್ಠ ಆಟವನ್ನು ಪ್ರದರ್ಶಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ರಾಹುಲ್ ಉತ್ತಮ ಆಟವನ್ನು ಪ್ರದರ್ಶಿಸಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಟೀಮ್ ಇಂಡಿಯಾ ಪರವಾಗಿ 2020ರ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದ್ದಾರೆ ಕೆಎಲ್ ರಾಹುಲ್. 9 ಏಕದಿನ ಪಂದ್ಯಗಳನ್ನು ಆಡಿರುವ ರಾಹುಲ್ 443 ರನ್ ಬಾರಿಸಿದ್ದಾರೆ. ಈ ವರ್ಷ ಅವರು ಏಕದಿನ ಕ್ರಿಕೆಟ್‌ನಲ್ಲಿ 55.4 ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ.

ಈ ವರ್ಷದಲ್ಲಿ ಕೆಎಲ್ ರಾಹುಲ್ ಏಕದಿನ ಕ್ರಿಕೆಟ್‌ನಲ್ಲಿ ಒಂದು ಶತಕವನ್ನು ಸಿಡಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ 112 ರನ್ ಗಳಿಸಿರುವುದು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರವಾಗಿ ಈ ವರ್ಷದ ಎರಡನೇ ಹೈಯೆಸ್ಟ್ ರನ್ ಎನಿಸಿಕೊಂಡಿದೆ. ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರವಾಹಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಯೂ ರಾಹುಲ್ ಪಾಲಾಗಿದೆ. ಏಕದಿನ ಕ್ರಿಕೆಟ್‌ನಲ್ಲಿ 16 ಸಿಕ್ಸರ್ ಬಾರಿಸಿರುವ ರಾಹುಲ್ ಟಿ20ಯಲ್ಲಿ ಈ ವರ್ಷ 13 ಸಿಕ್ಸರ್ ಬಾರಿಸಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm