ಬ್ರೇಕಿಂಗ್ ನ್ಯೂಸ್
22-12-20 03:11 pm Source: MYKHEL ಕ್ರೀಡೆ
ಕೊಪ್ಪಳ, ಡಿ.22: ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ (ಗುರುತುದಾರರು) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ ತರಬೇತಿಗೆ ಕೇಂದ್ರ ಕಛೇರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಜನರು ಡಿ. 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ಇಲಾಖೆ ವತಿಯಿಂದ ಕ್ರೀಡಾಶಾಲೆ ಕೂಡಿಗೆ,ಕುಶಾಲ್ ನಗರ, ಕೊಡಗು ಜಿಲ್ಲೆಯಲ್ಲಿ ಆಯೋಜಿಸುತ್ತಾರೆ. ತರಬೇತಿಯು ವಸತಿ ಸಹಿತವಾಗಿದ್ದು, ಹಾಜರಾಗುವ ಯುವಕ/ಯುವತಿಯರಿಗೆ ಪ್ರಮಾಣ ಪತ್ರ, ಕ್ರೀಡಾಗಂಟು, ಊಟೋಪಹಾರ, ವಸತಿ ವ್ಯವಸ್ಥೆ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ನೀಡಲಾಗುತ್ತದೆ. ಯುವತಿಯರ ಸಂಖ್ಯೆಯನ್ನು ಆಧರಿಸಿ ಪ್ರತ್ಯೇಕವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಆಸಕ್ತ ಯುವಜನರು ತರಬೇತಿಯ ನಿಗದಿತ ನಮೂನೆ ಅರ್ಜಿಗಳನ್ನು ಕಛೇರಿಯಿಂದ ಪಡೆಯಬೇಕು. ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುತ್ತದೆ. ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.(ಆರ್.ಡಿ.ನಂಬರ್ ಇರುವ ಪ್ರಮಾಣ ಪತ್ರ). ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕ್ರೀಡಾ ಅಂಕಣ ಗುರುತುದಾರರು ಕನಿಷ್ಠ 7ನೇ ತರಗತಿ ಓದಿರಬೇಕು. ಅರ್ಜಿದಾರರು ಸ್ವಯಂ ಧೃಡೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆ ಕಡ್ಡಾಯವಾಗಿ ಅರ್ಜಿದಾರರ ಹೆಸರಿನಲ್ಲಿರಬೇಕು ಸದರಿ ಪ್ರತಿ ಲಗತ್ತಿಸುವುದು. ಅರ್ಜಿದಾರರು ದೈಹಿಕವಾಗಿ ಸಧೃಡ ಹಾಗೂ ಚಟುವಟಿಕೆಯಿಂದ ಕೂಡಿದವರಾಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಬೇಕು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm