ಬ್ರೇಕಿಂಗ್ ನ್ಯೂಸ್
02-01-21 11:48 am Source: MYKHEL Sadashiva ಕ್ರೀಡೆ
ಸಿಡ್ನಿ, ಜ.2: ಆಸ್ಟ್ರೇಲಿಯಾ ಪ್ರವಾಸ ಸರಣಿಗಾಗಿ ಟೀಮ್ ಇಂಡಿಯಾ ಸೇರಿಕೊಂಡಿರುವ ಭಾರತದ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾಗೆ ಉಪನಾಯಕನ ಸ್ಥಾನ ಲಭಿಸಿದೆ. ಸರಣಿಯಿಂದ ಹೊರ ಬಿದ್ದಿರುವ ಟೆಸ್ಟ್ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಬದಲಿಗೆ ಉಪನಾಯಕ ಜವಾಬ್ದಾರಿ ಶರ್ಮಾ ವಹಿಸಿಕೊಳ್ಳಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿರುವುದರಿಂದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಇನ್ನಷ್ಟು ಕುತೂಹಲ ಮೂಡಿಸಿದೆ.
'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಸೇರಿಕೊಂಡಿರುವುದು ಭಾರತ ತಂಡಕ್ಕೆ ಆನೆ ಬಲ ತಂದಿದೆ. ಹಾಗಂತ ರೋಹಿತ್ ಬ್ಯಾಟಿಂಗ್ ಮಾಡುವ ಬಗ್ಗೆ ಹೊಸದೊಂದು ಗೊಂದಲ ಶುರುವಾಗಿದೆ. ಅದು ಶರ್ಮಾ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ. ರೋಹಿತ್ ಆರಂಭಿಕರಾಗಿ ಆಡಬೇಕೋ ಬೇಡವೋ ಎನ್ನುವ ಬಗ್ಗೆ.
ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಡಿಸೆಂಬರ್ 7ರ ಗುರುವಾರ 5 AMಗೆ ಆರಂಭಗೊಳ್ಳಲಿದೆ.
ಅಪಾಯಕಾರಿ ಆರಂಭಿಕ ಬ್ಯಾಟ್ಸ್‌ಮನ್
ನಿಯಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ವಿಶ್ವದ ಅಪಾಯಕಾರಿ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಕೂಡ ಒಬ್ಬರು. ಸದ್ಯ ಅಲ್ಲದಿದ್ದರೂ, ರೋಹಿತ್ ಆರಂಭಿಕರಾಗಿದ್ದುಕೊಂಡೇ ಸ್ಫೋಟಕ ಬ್ಯಾಟಿಂಗ್ ನಡೆಸಿದಿದೆ. ಆದರೆ ಟೆಸ್ಟ್‌ನಲ್ಲಿ ರೋಹಿತ್ ಪಂದ್ಯಗಳನ್ನಾಡಿದ್ದು ಕಡಿಮೆ. ಅದರಲ್ಲೂ ಆರಂಭಿಕರಾಗಿ ಆಡಿದ್ದು ಇನ್ನೂ ಕಡಿಮೆ. ಆದರೆ ಆರಂಭಿಕರಾಗಿ ಆಡಿದ ಮೂರೇ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧ 3 ಶತಕ
2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದ ಶರ್ಮಾ 132.25ರ ಸರಾಸರಿಯಂತೆ 529 ರನ್ ಬಾರಿಸಿದ್ದರು. ಇದರಲ್ಲಿ 3 ಶತಕಗಳಲ್ಲದೆ 212 ವೈಯಕ್ತಿಕ ಅತ್ಯಧಿಕ ರನ್ ಕೂಡ ಸೇರಿತ್ತು. ಆದರೆ ರೋಹಿತ್ ಟೆಸ್ಟ್ ಆಡಿ ಬಹಳಷ್ಟು ಅಂತರವಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಪಂದ್ಯದಲ್ಲಿ ಆರಂಭಿಕರಾಗಿ ಆಡಿಸಬೇಕೋ ಬೇಡವೋ ಎಂಬ ಗೊಂದಲ ಶುರುವಾಗಿದೆ.
ಓಪನರ್ ಆಗಿ ಬರ್ತಾರ ರೋಹಿತ್?
ರೋಹಿತ್ ಟೆಸ್ಟ್‌ನಲ್ಲಿ ಆರಂಭಿಕರಾಗಿ ಬ್ಯಾಟಿಂಗ್ ಆಡಿದ್ದು ಕಡಿಮೆ. 7 ಅಥವಾ 5ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿದ್ದೇ ಹೆಚ್ಚು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್‌ನಲ್ಲಿ ರೋಹಿತ್ ಯಾವ ಕ್ರಮಾಂಕದಲ್ಲಿ ಬರಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ. ರೋಹಿತ್ ಆರಂಭಿಕರಾಗಿ ಇಳಿದರೆ ಅವರಿಗೆ ಜೊತೆಯಾಗಿ ಯಾರು ಬರಲಿದ್ದಾರೆ ಅನ್ನೋದು ಕಾದು ನೋಡಬೇಕಾಗಿದೆ.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm