ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್‌ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್‌ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್‌ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm