ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್‌ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
24-09-26 11:10 am
HK News Staffer
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm