ಐಸಿಸಿ ಟೆಸ್ಟ್ ರ‍್ಯಾಂಕಿಂಗ್: 4ನೇ ಸ್ಥಾನಕ್ಕೆ ಕುಸಿದ ಕೊಹ್ಲಿ, ಕೀಪರ್‌ಗಳ ಪೈಕಿ ಪಂತ್‌ಗೆ ಅಗ್ರ ಸ್ಥಾನ

20-01-21 02:42 pm       Source: MYKHEL Madhukara Shetty   ಕ್ರೀಡೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಟೀಮ್ ಇಂಡಿಯಾ 2-1 ಅಂತರದಿಂದ ಸರಣಿಯನ್ನು ಸತತ ಎರಡನೇ ಬಾರಿಗೆ ಕೈವಶ ಮಾಡಿಕೊಂಡಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಟೀಮ್ ಇಂಡಿಯಾ 2-1 ಅಂತರದಿಂದ ಸರಣಿಯನ್ನು ಸತತ ಎರಡನೇ ಬಾರಿಗೆ ಕೈವಶ ಮಾಡಿಕೊಂಡಿದೆ. ಈ ಸರಣಿಯ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೇವಲ 1 ಪಂದ್ಯವನ್ನಷ್ಟೇ ಆಡಿ ಬಳಿಕ ಪಿತೃತ್ವದ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿತವನ್ನು ಕಂಡಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದು ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನದ ಬಳಿಕ ಫಾರ್ಮ್ ಕಂಡುಕೊಂಡ ಸ್ಮಿತ್ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಮಾರ್ನಾಸ್ ಲ್ಯಾಬುಶೇನ್ ಮೂರನೇ ಸ್ಥಾನಕ್ಕೇರಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಪ್ರಕಟವಾದ ಈ ಶ್ರೇಯಾಂಕ ಪಟ್ಟಿಯಲ್ಲಿ ಅತಿ ಹೆಚ್ಚು ಗಳಿಕೆಯನ್ನು ಕಂಡ ಬ್ಯಾಟ್ಸ್‌ಮನ್ ಎಂದರೆ ಅದು ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್. ಗಾಬಾ ಅಂಗಳದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಪಂತ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 13ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿಕೆಟ್ ಕೀಪರ್‌ಗಳ ಪೈಕಿ ಅತಿ ಹೆಚ್ಚು ಶ್ರೇಯಾಂಕ ಹೊಂದಿರುವ ಆಟಗಾರ ಎನಿಸಿಕೊಂಡಿದ್ದಾರೆ.

This News Article is a Copy of MYKHEL