ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಗಂಗೂಲಿ

27-01-21 04:01 pm       Headline Karnataka News Network   ಕ್ರೀಡೆ

ಮಾಜಿ ಟೀಮ್ ಇಂಡಿಯಾ ನಾಯಕ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕೋಲ್ಕತ್ತಾ, ಜನವರಿ 27: ಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.  

ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಲಘು ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಕೋಲ್ಕತ್ತಾ ವುಡ್​ಲ್ಯಾಂಡ್ ಆಸ್ಪತ್ರೆಗೆ ಈ ಹಿಂದೆ ದಾಖಲಿಸಲಾಗಿತ್ತು. ಇದಾದ ಬಳಿಕ ಆ್ಯಂಜಿಯೊಪ್ಲಾಸ್ಟಿ ಮಾಡಲಾಗಿತ್ತು. ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ದಾದಾ ಜನವರಿ 6ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

BCCI president and former India captain Sourav Ganguly has been hospitalised again after he complained of chest pain on Wednesday morning, according to his family sources.