ಬ್ರೇಕಿಂಗ್ ನ್ಯೂಸ್
01-02-21 05:17 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ತಿಂಗಳು ಮೊದಲನೇ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಹೆತ್ತವರಾದ ಸಂಭ್ರಮದಲ್ಲಿರುವ ಈ ದಂಪತಿ ಈಗ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪುತ್ರಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಪುತ್ರಿಗೆ "ವಮಿಕಾ" ಎಂದು ನಾಮಕರಣ ಮಾಡಿದ್ದಾರೆ. ಫೋಟೋ ಜೊತೆಗೆ ಸುಂದರ ಸಾಲುಗಳನ್ನು ಬರೆದುಕೊಂಡು ಅನುಷ್ಕಾ ತಮ್ಮ ಪುತ್ರಿಯ ಹೆಸರನ್ನು ಮೊದಲ ಬಾರಿಗೆ ಅಭಿಮಾನಿಗಳೊಂದಿಗೆ ಹಂಚಿಕೊಂಡದ್ದಾರೆ.
"ನಾವು ಪ್ರೀತಿ, ಕೃತಜ್ಞತೆ ಉಪಸ್ಥಿತಿಯೊಂದಿಗೆ ಜೊತೆಯಾಗಿ ವಾಸಿಸುತ್ತಿದ್ದೇವೆ. ಆದರೆ ಈಗ ಪುಟ್ಟ ವಮಿಕಾ ಅದನ್ನು ಇನ್ನೊಂದು ಮಟ್ಟಕ್ಕೆ ತೆಗದುಕೊಂಡು ಹೋಗುತ್ತಿದ್ದಾಳೆ. ಕಣ್ಣೀರು, ನಗು, ಚಿಂತೆ, ಆನಂದ ಕೆಲವೊಮ್ಮೆ ನಿಮಿಷಗಳ ಅಂತರದಲ್ಲಿ ಅನುಭವಿಸಿದ ಭಾವನೆಗಳು" ಎಂದು ಅನುಷ್ಕಾ ಶರ್ಮಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಎಲ್ಲಾ ಭಾವನೆಗಳಿಗಿಂತ ಪುತ್ರಿಯ ಸಾಂಗತ್ಯ ಮಿಗಿಲು ಎಂಬರ್ಥದ ಸಾಲುಗಳನ್ನು ಅನುಷ್ಕಾ ಶರ್ಮ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಸದ್ಯ ಚೆನ್ನೈಗೆ ಬಂದಿಳಿದಿರುವ ವಿರಾಟ್ ಕೊಹ್ಲಿ ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಫೆಬ್ರವರಿ 5ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಮತ್ತೆ ಟೀಮ್ ಇಂಡಿಯಾದ ಚುಕ್ಕಾಣಿ ಹಿಡಿಯಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಡಿಲೇಡ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಲ್ಗೊಂಡ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರು. ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಆಸಿಸ್ ವಿರುದ್ಧದ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಜನವರಿ 11ರಂದು ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm