ಒಂದು ವರ್ಷದ ಬಳಿಕ ಭಾರತದಲ್ಲಿ ಮತ್ತೆ ಕ್ರಿಕೆಟ್ ಆರಂಭಕ್ಕೆ ಕ್ಷಣಗಣನೆ

04-02-21 02:47 pm       Source: MYKHEL Madhukara Shetty   ಕ್ರೀಡೆ

ಕೊರೊನಾ ವೈರಸ್‌ನಿಂದಾಗಿ ಭಾರತದಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಭಾರತದಲ್ಲಿ ಮರು ಚಾಲನೆ ದೊರೆಯುತ್ತಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುಕ್ರವಾರೆ ಆರಂಭವಾಗಲಿದೆ. ಈ ಮೂಲಕ ಕೊರೊನಾ ವೈರಸ್‌ನಿಂದಾಗಿ ಭಾರತದಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಭಾರತದಲ್ಲಿ ಮರು ಚಾಲನೆ ದೊರೆಯುತ್ತಿದೆ. ಹೀಗಾಗಿ ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಈ ಸರಣಿಯ ಮೇಲೆ ಸಾಕಷ್ಟು ನಿರೀಕ್ಷೆಯನ್ನಿಟ್ಟು ಕಾಯುತ್ತಿದ್ದಾರೆ.

ಭಾರತದಲ್ಲಿ ಕೊನೆಯ ಬಾರಿಗೆ ಸರಣಿ ಆಯೋಜನೆಯಾಗಿದ್ದ ಕಳೆದ ಮಾರ್ಚ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ. ಆದರೆ ಈ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾದರೆ ಬಳಿಕ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರಣಿಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಪುಣೆಯಲ್ಲಿ ಆಡಿದ ಟಿ20 ಕದನವೇ ಅಂತಿಮ ಪಂದ್ಯವಾಗಿತ್ತು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದ್ದು 50 ಶೇಕಡಾದಷ್ಟು ಪ್ರೇಕ್ಷಕರು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿ ಈ ಟೆಸ್ಟ್ ಕದನ ಈ ಐಸಿಸಿ ವಿಶ್ವ ಟಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಸ್ಥಾನ ಪಡೆಯುವ ದೃಷ್ಟಿಯಿಂದಲೂ ಬಹಳ ನಿರ್ಣಾಯಕವಾಗಿದೆ. ಭಾರತ ಇಂಗ್ಲೆಂಡ್ ಜೊತೆಗೆ ಆಸ್ಟ್ರೇಲಿಯಾದ ಫೈನಲ್ ಪ್ರವೇಶದ ಭವಿಷ್ಯವನ್ನೈ ಈ ಸರಣಿ ನಿರ್ಣಯಿಸಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ನ್ಯೂಜಿಲೆಂಡ್ ಮೊದಲ ತಂಡವಾಗಿ ಪ್ರವೇಶ ಪಡೆದುಕೊಂಡಿದೆ.

This News Article is a Copy of MYKHEL