ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲು

15-02-21 02:50 pm       Source: MYKHEL Madhukara Shetty   ಕ್ರೀಡೆ

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಲೈವ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಪದ ಬಳಸಿದ್ದರು ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಈ ವಿಚಾರವಾಗಿ ಈಗ ಎಫ್‌ಐಆರ್ ದಾಖಲಾಗಿದೆ.

2020ರಲ್ಲಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಜೊತೆಗೆ ಲೈವ್‌ಗೆ ಬಂದ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್‌ಗೆ ತಮಾಷೆ ಮಾತನಾಡುತ್ತಾ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಈ ಮಾತುಗಳು ಜಾತಿನಿಂದಕ ಎಂದು ಆರೋಪಿಸಲಾಗಿದ್ದು ಹರ್ಯಾಣ ಪೊಲೀಸರು ಯುವರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಹರ್ಯಾಣದ ಹಿಸಾರ್‌ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 14ರಂದು ಭಾನುವಾರ ಯುವರಾಜ್ ಸಿಂಗ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಜೊತೆಗೆ ಐಸಿಪಿ ಸೆಕ್ಷನ್ 153, 153A, 295 ಹಾಗೂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಯುವರಾಜ್ ಸಿಂಗ್ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಯುವರಾಜ್ ಸಿಂಗ್ ಈ ಬಗ್ಗೆ ಕ್ಷಮೆಯಾಚನೆಯನ್ನೂ ಮಾಡಿದ್ದರು. ಇದು ಉದ್ಧೇಶಪೂರ್ವಕವಾಗಿ ಅಲ್ಲದೆ ಮಾಡಿದ ತಪ್ಪಾಗಿದೆ ಎಂದು ಯುವಿ ಕ್ಷಮೆ ಕೇಳಿದ್ದರು. ಈ ಘಟನೆ ಬಗ್ಗೆ ಈಗ ಎಫ್‌ಐಆರ್ ದಾಖಲಾಗಿದೆ.

This News Article is a Copy of MYKHEL