ಬ್ರೇಕಿಂಗ್ ನ್ಯೂಸ್
20-02-21 10:27 am Headline Karnataka News Network ಕ್ರೀಡೆ
ತಿರುವನಂತಪುರಂ, ಫೆ.20: 'ಮೆಟ್ರೋ ಮ್ಯಾನ್' ಖ್ಯಾತಿಯ ಇ. ಶ್ರೀಧರನ್ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಕೇರಳದಿಂದ ಮತ್ತೊಬ್ಬ ಸೆಲೆಬ್ರಿಟಿ ಕೂಡ ಕೇಸರಿ ಪಾಳೆಯದತ್ತ ಮುಖ ಮಾಡಿದ್ದಾರೆ. 'ಪಯ್ಯೋಲಿ ಎಕ್ಸ್‌ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಉಷಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಜವಾಬ್ದಾರಿಯನ್ನು ಕೇರಳ ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಅವರಿಗೆ ವಹಿಸಲಾಗಿದೆ.
ಕೇರಳದಲ್ಲಿ ಚುನಾವಣೆಗೆ ಪೂರ್ವ ತಯಾರಿ ನಡೆಸಲು ಬಿಜೆಪಿ 'ವಿಜಯ ಯಾತ್ರೆ' ಆಯೋಜಿಸುತ್ತಿದ್ದು, ಈ ಸಂದರ್ಭದಲ್ಲಿ ಪಿಟಿ ಉಷಾ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ರೈತರ ಪ್ರತಿಭಟನೆ ವಿಚಾರದಲ್ಲಿ ವಿದೇಶಿಗರು ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಭಾರತ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳಲ್ಲಿ ಪಿಟಿ ಉಷಾ ಕೂಡ ಸೇರಿದ್ದರು. ಅದೇ ವೇಳೆ ಪಿಟಿ ಉಷಾ ಅವರ ಬಿಜೆಪಿ ಸೇರ್ಪಡೆಯ ಚರ್ಚೆ ಶುರುವಾಗಿತ್ತು. ಈ ಹಿಂದೆಯೂ ಪಿಟಿ ಉಷಾ ಅವರ ಬಿಜೆಪಿ ಸೇರ್ಪಡೆ ಚರ್ಚೆ ನಡೆದಿತ್ತು. ಆದರೆ ಅದನ್ನು ಅವರು ನಿರಾಕರಿಸಿದ್ದರು.
ಕೇರಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯು ಪಕ್ಷಕ್ಕೆ ಸೆಲೆಬ್ರಿಟಿಗಳನ್ನು ಸೆಳೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ. ನಟ ಉನ್ನಿ ಮುಕುಂದನ್ ಜತೆ ಸುರೇಂದ್ರ ಅವರು ಮಾತುಕತೆ ನಡೆಸಿ, ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನಿಸಿದ್ದರು. ಆದರೆ ಉನ್ನಿ ಮುಕುಂದನ್ ಪ್ರಸ್ತುತ ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪರ್ಧೆಯ ಬಗ್ಗೆ ಪರಿಗಣಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ನಟಿ ಅನುಶ್ರೀ ಜತೆ ಕೂಡ ಬಿಜೆಪಿ ಸಮಾಲೋಚನೆ ನಡೆಸಿದ್ದು, ಸಕ್ರಿಯ ರಾಜಕಾರಣದ ಬಗ್ಗೆ ತಮಗೆ ಆಸಕ್ತಿ ಇಲ್ಲ ಎಂದು ಅವರು ಹೇಳಿದ್ದಾರೆ. ಕಿರುತೆರೆ ನಟಿ ನಿಶಾ ಸಾರಂಗ್, ನಟಿ ಮಲ್ಲಿಕಾ ಸುಕುಮಾರನ್ ಜತೆ ಕೂಡ ಮಾತುಕತೆ ನಡೆಯುತ್ತಿದೆ. ಮಲ್ಲಿಕಾ ಅವರು ಸ್ಪರ್ಧೆಗೆ ಇಳಿಯಲು ನಿರಾಕರಿಸಿದ್ದಾರೆ. ಆದರೆ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm