ಅಂತಿಮ ಹಣಾಹಣಿಗಾಗಿ ನೆಟ್‌ನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ ಮತ್ತು ತಂಡ

01-03-21 10:42 am       Source: MYKHEL   ಕ್ರೀಡೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದೆ. ಮಾರ್ಚ್ ನಾಲ್ಕರಿಂದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸಿದ್ಧತೆಯನ್ನು ನಡೆಸುತ್ತಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದೆ. ಮಾರ್ಚ್ ನಾಲ್ಕರಿಂದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸಿದ್ಧತೆಯನ್ನು ನಡೆಸುತ್ತಿದ್ದಾರೆ.

ಭಾನುವಾರ ವಿರಾಟ್ ಕೊಹ್ಲಿ ನೇತೃತ್ವ ಟೀಮ್ ಇಂಡಿಯಾ ನಾಲ್ಕನೇ ಪಂದ್ಯಕ್ಕಾಗಿ ಭರ್ಜರಿ ಅಭ್ಯಾಸವನ್ನು ನಡೆಸಿದೆ. ನೆಟ್‌ನಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದು ಬೆವರಿಳಿಸಿ ಅಭ್ಯಾಸವನ್ನು ಮಾಡಿದ್ದಾರೆ. ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸದ್ಯ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.

ಬಿಸಿಸಿಐನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟೀಮ್ ಇಂಡಿಯಾ ಆಟಗಾರರ ಅಭ್ಯಾಸದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬ್ಯಾಟಿಂಗ್ ಅಭ್ಯಾಸವನ್ನು ನಡೆಸುತ್ತಿದ್ದರೆ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು. ಮತ್ತೊಂದೆಡೆ ಅಜಿಂಕ್ಯ ರಹಾನೆ ಫೀಲ್ಡಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಹಂಚಿಕೊಳ್ಳಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಸರಣಿ ಕೇವಲ ಎರಡೇ ದಿನದಲ್ಲಿ ಅಂತ್ಯವಾಗಿದ್ದು ಭಾರತ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಪಿನ್ನರ್‌ಗಳಿಗೆ ಸಹಕಾರಿಯಾಗಿದ್ದ ಪಿಚ್‌ನಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ಮಿಂಚುವಲ್ಲಿ ಸಂಪೂರ್ಣ ವಿಫಲವಾಗಿದ್ದರು.

ಮತ್ತೊಂದೆಡೆ ಐಸಿಸಿ ಪ್ರಕಟಿಸಿದ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಹಲವು ಆಟಗಾರರು ಉತ್ತಮ ಸಾಧನೆ ತೋರಿದ್ದಾರೆ. ಆರ್ ಅಶ್ವಿನ್, ಅಕ್ಷರ್ ಪಟೇಲ್ ಮತ್ತೊ ರೋಹಿತ್ ಶರ್ಮಾ ಮಹತ್ವದ ಏರಿಕೆ ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟಿಂಗ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನ ತಮ್ಮ ಸಾರ್ವಕಾಲಿಕ ಉತ್ತಮ ಶ್ರೇಯಾಂಕ 8ನೇ ಸ್ಥಾನಕ್ಕೇರಿದ್ದಾರೆ ರೋಹಿತ್ ಶರ್ಮಾ. ಮತ್ತೊಂದೆಡೆ ಆರ್ ಅಶ್ವಿನ್ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಅಕ್ಷರ್ ಪಟೇಲ್ 30 ಸ್ಥಾನಗಳ ಏರಿಕೆ ಕಂಡಿದ್ದು ಈಗ 38ನೇ ಶ್ರೇಯಾಂಕದಲ್ಲಿದ್ದಾರೆ.

This News Article Is A Copy Of MYKHEL