ವಿಜಯ್ ಹಜಾರೆ ಟ್ರೋಫಿ: ಕ್ವಾರ್ಟರ್‌ಫೈನಲ್‌ನಲ್ಲಿ ಕರ್ನಾಟಕಕ್ಕೆ ಮನೀಶ್ ಪಾಂಡೆ, ಕೆ ಗೌತಮ್ ಬಲ

02-03-21 11:06 am       Source: MYKHEL   ಕ್ರೀಡೆ

ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.

ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.

ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.

ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.

This News Article Is A Copy Of MYKHEL