COVID-19 ಲಸಿಕೆ ಹಾಕಿಸಿಕೊಂಡ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ

02-03-21 12:22 pm       Source: MYKHEL   ಕ್ರೀಡೆ

ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್‌ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್‌ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.

ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಸದ್ಯ ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಅಂತಿಮ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಅಂತಿಮ ಪಂದ್ಯಕ್ಕೂ ಮುನ್ನ ಕೋಚ್ ರವಿ ಶಾಸ್ತ್ರಿ ಅಹ್ಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಅಹ್ಮದಾಬಾದ್‌ನ ಅಪೊಲೋ ಆಸ್ಪತ್ರೆಯಲ್ಲಿ ರವಿ ಶಾಸ್ತ್ರಿ ಕೊರೊನಾ ಲಸಿಕೆಯ ಮೊದಲ ಡೋಸ್‌ಅನ್ನು ಹಾಕಿಸಿಕೊಂಡಿದ್ದಾರೆ. ಬಳಿಕ ಟ್ವಿಟ್ಟರ್‌ನಲ್ಲಿ ಭಾರತದ ವೈದ್ಯಕೀಯ ಸಿಬ್ಬಂಧಿಗಳ ಹಾಗೂ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.

ಭಾರತದಲ್ಲಿ ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಈಗ ಲಸಿಕೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಾದರೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್‌ಗೆ 250 ರೂಪಾಯಿಯನ್ನು ನಿಗದಿಪಡಿಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್‌ನಲ್ಲಿ ನಿರ್ಮಾಣವಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ ನಾಲ್ಕರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಈಗ 2-1 ಅಂತರದಿಂದ ಮುನ್ನಡೆಯನ್ನು ಪಡೆದುಕೊಂಡಿದೆ.

This News Article Is A Copy Of MYKHEL