ಬ್ರೇಕಿಂಗ್ ನ್ಯೂಸ್
03-03-21 04:02 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಾಚೆ ಶತಕವನ್ನು ಬಾರಿಸಿ ಈಗ ಸುದ್ದಿಯಾಗಿದ್ದಾರೆ. ವಿರಾಟ್ ಕೊಹ್ಲಿ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅಭಿಮಾನಿಗಳನ್ನು ಹೊಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿನ ಮಹತ್ವದ ಮೈಲಿಗಲ್ಲಿಗೆ ವಿರಾಟ್ ಕೊಹ್ಲಿ ಸಂತಸದಿಂದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿನ ಕೆಲ ವಿಶೇಷ ಸಂದರ್ಭಗಳ ಫೋಟೋಗಳ ವಿಡಿಯೋ ಹೈಲೈಟ್‌ಅನ್ನು ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಕೊಹ್ಲಿ ಜೀವನದ ಕೆಲ ಪ್ರಮುಖ ಕ್ಷಣಗಳು ಈ ವಿಡಿಯೋದಲ್ಲಿದೆ. ಈ ಸುಂದರ ವಿಡಿಯೋ ಜೊತೆಗೆ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
"ನೀವು ಈ ಪಯಣವನ್ನು ಸುಂದರಗೊಳಿಸಿದ್ದೀರಿ. ನಿಮ್ಮೆಲ್ಲರ ಪ್ರೀತಿ ಹಾಗೂ ಆಶಿರ್ವಾದಕ್ಕೆ ಆಭಾರಿಯಾಗಿದ್ದೇನೆ. ಧನ್ಯವಾದಗಳು" ಎಂದು ವಿರಾಟ್ ಕೊಹ್ಲಿ ಈ ವಿಡಿಯೋಗೆ ನೀಡಿರುವ ಬರಹದಲ್ಲಿ ಹೇಳಿಕೊಂಡಿದ್ದಾರೆ. ಜೊತೆಗೆ '100 ಮಿಲಿಯನ್' ಹಾಗೂ #instafam ಎಂದು ಸೇರಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿಯ ಬಾಲ್ಯದಿಂದ ಹಿಡಿದು ಮದುವೆಯವರೆಗಿನ ಹಾಗೂ ಮೈದಾನದಲ್ಲಿನ ಕೆಲ ಸ್ಮರಣೀಯ ಕ್ಷಣಗಳು ಇದೆ. ಜೊತೆಗೆ ತಾಯಿಯ ಜೊತೆಗಿನ ಫೋಟೋ, ಜಿಮ್‌ನಲ್ಲಿ ಕೊಹ್ಲಿಯ ತಾಲೀಮಿನ ಫೋಟೋ ಹಾಗೂ 2019ರ ವಿಶ್ವಕಪ್‌ನಲ್ಲಿ 87ರ ಹರೆಯದ ಹಿರಿಯ ಅಭಿಮಾನಿಗನ್ನು ಭೇಟಿ ಮಾಡಿದ ಫೋಟೋ ಹಾಗೂ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಂದ ಖೇಲ್‌ರತ್ನ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಫೋಟೋ ಕೂಡ ಇದೆ.
ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಂನಲ್ಲಿ 100 ಕೋಟಿ ಬೆಂಬಲಿಗರನ್ನು ಹೊಂದಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಯನ್ನು ಮಾಡಿದ ಮೊದಲ ಕ್ರಿಕೆಟರ್ ಕೂಡ ಕೊಹ್ಲಿ ಆಗಿದ್ದಾರೆ. ಫಿಟ್ಬಾಲ್ ಸೂಪರ್ ಸ್ಟಾರ್‌ಗಳಾದ ಲಿಯೋನೆಲ್ ಮೆಸ್ಸಿ, ಕ್ರಿಶ್ಚಿಯಾನೋ ರೊನಾಲ್ಡೋ ಹಾಗೂ ನೇಯ್ಮಾರ್ ಅವರು ಇರುವ ಎಲೈಟ್ ಕ್ಲಬ್‌ಗೆ ವಿರಾಟ್ ಕೊಹ್ಲಿ ಸೇರಿಕೊಂಡಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm