ಭಾರತ vs ಇಂಗ್ಲೆಂಡ್: ಅಂತಿಮ ಟೆಸ್ಟ್, 2ನೇ ದಿನ, Live ಸ್ಕೋರ್ ಮಾಹಿತಿ

05-03-21 10:57 am       Source: MYKHEL   ಕ್ರೀಡೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತ ಮೊದಲ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 205 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತ ಮೊದಲ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 205 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತ ಒಂದು ವಿಕೆಟ್ ಕಳೆದುಕೊಂಡು 24 ರನ್ ಗಳಿಸಿದ್ದು ಮೊದಲ ದಿನದಾಟವನ್ನು ಅಂತ್ಯಗೊಳಿಸಿತು.

ಮೊದಲ ದಿನದಾಟದಲ್ಲಿ ಭಾರತದ ಬೌಲರ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದರು. ಟೀಮ್ ಇಂಡಿಯಾ ಪರವಾಗಿ ಅಕ್ಷರ್ ಪಟೇಲ್ ತಾವು ಆಡುತ್ತಿರುವ ಮೂರನೇ ಪಂದ್ಯದಲ್ಲೂ ಮಿಂಚಿದರು. ಅಕ್ಷರ್ ಪಟೇಲ್ ಮೊದಲ ದಿನದಾಟದಲ್ಲಿ ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್‌ನ ನಾಲ್ಕು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಅಶ್ವಿನ್ ಕೂಡ ಮೂರು ವಿಕೆಟ್ ಪಡೆದು ಮಿಂಚಿದರು.

ಇಂಗ್ಲೆಂಡ್ ಪರವಾಗಿ ಬೆನ್ ಸ್ಟೋಕ್ಸ್ ಹಾಗೂ ಡೇನಿಯಲ್ ಲಾರೆನ್ಸ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಸ್ಟೋಕ್ಸ್ 55 ರನ್ ಗಳಿಸಿದರೆ ಲಾರೆನ್ಸ್ 46 ರನ್‌ಗಳ ಕೊಡುಗೆಯನ್ನು ನೀಡಿದ್ದಾರೆ. ನಾಯಕ ಜೋ ರೂಟ್ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು.

Live ಸ್ಕೋರ್‌ಪಟ್ಟಿ ಹೀಗಿದೆ:

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್‌ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.

This News Article Is A Copy Of MYKHEL