ಬ್ರೇಕಿಂಗ್ ನ್ಯೂಸ್
22-03-21 02:40 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಇಂಗ್ಲೆಂಡ್ ವೇಗಿ ಜೋಪ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಭಾರತದ ವಿರುದ್ಧದ ಏಕದಿನ ಸರಣಿಯ ಜೊತೆಗೆ ಜೋಪ್ರಾ ಆರ್ಚರ್ ಐಪಿಎಲ್‌ನ ಕೆಲ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದೆ.
ಬಲ ಮೊಣಕೈ ಗಾಯದ ಹಿನ್ನೆಲೆಯಲ್ಲಿ ಜೋಫ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದು ವೈದ್ಯಕೀಯ ಪರಿಶೀಲನೆಗಾಗಿ ಯುಕೆಗೆ ಮರಳಿದ್ದಾರೆ. ಹೀಗಾಗಿ ಅವರ ವೈದ್ಯಕೀಯ ಪರಿಶೀಲನೆಯ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ವೈದ್ಯರ ನಿಗಾದಲ್ಲಿ ಜೋಫ್ರಾ ಆರ್ಚರ್ ಇರಲಿದ್ದಾರೆ. ಐಪಿಎಲ್‌ನಲ್ಲಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
"ಭಾರತದ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಯ ಅವಧಿಯಲ್ಲಿ ಆರ್ಚರ್ ಅವರ ಮೊಣಕೈ ಸಮಸ್ಯೆ ಹೆಚ್ಚಾಗಿದೆ. ಅವರ ಕಾರ್ಯಕ್ಷಮತೆಯ ಮಟ್ಟವನ್ನು ಕಾಯ್ದುಕೊಳ್ಳುವುದು ಅವರಿಗೆ ಹೆಚ್ಚು ಸವಾಲಾಗಿ ಪರಿಣಮಿಸಿದೆ" ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕಳೆದ ಶನಿವಾರ ಮಾತನಾಡುತ್ತಾ ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ಜೋಫ್ರಾ ಆರ್ಚರ್ ಹೊರಗುಳಿಯುವ ಸುಳಿವು ನೀಡಿದ್ದರು. ಆರ್ಚರ್ ಮೊಣಕೈ ನೋವು ಹೆಚ್ಚಾಗುತ್ತಿರುವ ವಿಚಾರವನ್ನು ಈ ಸಂದರ್ಭದಲ್ಲಿ ಅವರು ತಿಳಿಸಿದ್ದರು.
ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಪುಣೆಯಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಮೂರು ಪಂದ್ಯಗಳಿಗೂ ಪುಣೆ ಕ್ರೀಡಾಂಗಣ ವೇದಿಕೆಯಾಗಲಿದೆ. ಎರಡು ತಂಡಗಳು ಚುಟುಕು ಸರಣಿಯ ನಂತರ ಏಕದಿನ ಸರಣಿಗೆ ಸಜ್ಜಾಗಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm