ಬ್ರೇಕಿಂಗ್ ನ್ಯೂಸ್
26-03-21 02:38 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೇವಲ ಒಂದು ಬದಲಾವಣೆಯನ್ನು ಮಾತ್ರವೇ ಭಾರತ ತಂಡ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಗಾಯಗೊಂಡು ಹೊರಬಿದ್ದಿರುವ ಶ್ರೇಯಸ್ ಐಯ್ಯರ್ ಸ್ಥಾನಕ್ಕೆ ರಿಷಭ್ ಪಂತ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸುದೀರ್ಘ 437 ದಿನಗಳ ನಂತರ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ ರಿಷಭ್ ಪಂತ್. ಪಂತ್ ಕೊನೆಯ ಬಾರಿ 2020ರ ಜನವರಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಏಕದಿನ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದಿದ್ದರು.
ಬಳಇಕ ರಿಷಭ್ ಪಂತ್ ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಏಕದಿನ ತಂಡದಲ್ಲಿದ್ದರು. ಆದರೆ ಆಡುವ ಬಳಗದಲ್ಲಿ ಪಂತ್ ಅವಕಾಶ ಪಡೆದಿರಲಿಲ್ಲ. ಕೆಎಲ್ ರಾಹುಲ್ ಅವರು ವಿಕೆಟ್ ಕೀಪಿಂಗ್ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದರು. ಅದಾದ ನಂತರ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಂತ್ ಸೀಮಿತ ಓವರ್‌ಗಳ ಸರಣಿಗೆ ಆಯ್ಕೆಯಾಗಿರಲಿಲ್ಲ.
ಪಂತ್ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಬಳಿಕ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ನೀಡಿದ ಮ್ಯಾಚ್ ವಿನ್ನಿಂಗ್ ಪ್ರದರ್ಶನದಿಂದಾಗಿ ಮತ್ತೆ ಸೀಮತ ಓವರ್‌ಗಳ ಸರಣಿಗೆ ತನ್ನನ್ನು ಪರಿಗಣಿಸುವಂತೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಜೊತೆಗೆ ಟಿ20 ಹಾಗೂ ಏಕದಿನ ಸ್ಕ್ವಾಡ್‌ಗೂ ಪಂತ್ ಮರಳಿದರು. ಈಗ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಿಷಭ್ ಪಂತ್ ಈವರೆಗೆ ಭಾರತದ ಪರವಾಗಿ 16 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ 374 ರನ್‌ಗಳಿಸಿದ್ದು 103.6ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. 2020ರಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ಸೀಮಿತ ಓವರ್‌ಗಳ ಸರಣಿಗೆ ಬಂದಿದ್ದಾಗ ಪಂತ್ ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದರು.
ಭಾರತ ಪ್ಲೇಯಿಂಗ್ XI ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm