ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm