ಬ್ರೇಕಿಂಗ್ ನ್ಯೂಸ್
29-03-21 03:12 pm Source: MYKHEL ಕ್ರೀಡೆ
ಭಾರತ - ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಜಾನಿ ಬೈರ್‌ಸ್ಟೋವ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಸೇರಿಕೊಳ್ಳಲಿರುವ ಜಾನಿ ಬೈರ್‌ಸ್ಟೋವ್ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬುದನ್ನು ಹೆಸರಿಸಿದ್ದಾರೆ. ಏಪ್ರಿಲ್ 9ರಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನ 14ನೇ ಆವೃತ್ತಿ ಆರಂಭಗೊಳ್ಳುತ್ತಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಾಧಾರಣ ಪ್ರದರ್ಶನ ತೋರಿದ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ತಲುಪಲಷ್ಟೇ ಶಕ್ತವಾಯಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಹೈದರಾಬಾದ್ ಫೈನಲ್ ತಲುಪುವ ಅವಕಾಶ ವಂಚಿತವಾಗಿ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಕಪ್ ಗೆಲ್ಲುವ ಒಳ್ಳೆಯ ಅವಕಾಶವನ್ನು ಹೊಂದಿದೆ ಎಂದು ಜಾನಿ ಬೈರ್‌ಸ್ಟೋವ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಬೈರ್‌ಸ್ಟೋವ್ ಐಪಿಎಲ್ ಒಂದು ಅದ್ಭುತ ಟೂರ್ನಿ, ಪ್ರತಿಯೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನೂ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಬೇಕು ಎಂಬ ಕನಸನ್ನು ಹೊಂದಿರುತ್ತಾನೆ ಎಂದು ಹೇಳಿದರು.
ಇನ್ನೊಂದು ವಾರದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಳ್ಳಲಿರುವ ಬಗ್ಗೆ ಉತ್ಸುಕನಾಗಿರುವ ಜಾನಿ ಬೈರ್‌ಸ್ಟೋವ್ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಕಪ್ ಗೆಲ್ಲುವ ಒಳ್ಳೆಯ ಅವಕಾಶವಿದೆ ಎಂದಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಉತ್ತಮ ಪ್ರದರ್ಶನವನ್ನು ತೋರುತ್ತಿದ್ದು ಎಲ್ಲರೂ ಒಟ್ಟಿಗೆ ಸೇರಿದಾಗ ತಂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಹೀಗಾಗಿ ಈ ಬಾರಿ ಕಪ್ ಗೆಲ್ಲುವ ಅವಕಾಶ ನಮಗೆ ಹೆಚ್ಚಿದೆ ಎಂದು ಬೈರ್‌ಸ್ಟೋವ್ ವಿಶ್ವಾಸ ವ್ಯಕ್ತಪಡಿಸಿದರು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm