ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್‌ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್‌ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್‌ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್‌ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್‌ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್‌ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am