ಆರ್‌ಸಿಬಿ ಮೊದಲ ಅಭ್ಯಾಸದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್: ವಿಡಿಯೋ

06-04-21 01:14 pm       Source: MYKHEL   ಕ್ರೀಡೆ

ಏಪ್ರಿಲ್ 9ರಿಂದ ಆರಂಭಗೊಳ್ಳಲಿರುವ 2021ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಪ್ರಮುಖ ಆಲ್ ರೌಂಡರ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅಭ್ಯಾಸ ಆರಂಭಿಸಿದ್ದಾರೆ.

ಚೆನ್ನೈ: ಏಪ್ರಿಲ್ 9ರಿಂದ ಆರಂಭಗೊಳ್ಳಲಿರುವ 2021ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಪ್ರಮುಖ ಆಲ್ ರೌಂಡರ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅಭ್ಯಾಸ ಆರಂಭಿಸಿದ್ದಾರೆ. ಆರ್‌ಸಿಬಿಯ ಮೊದಲ ಅಭ್ಯಾಸದಲ್ಲಿ ಮ್ಯಾಕ್ಸ್‌ವೆಲ್ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿದೆ.

ಏಳುದಿನಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಸಿಬಿಯ ಅಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ. ಆರ್‌ಸಿಬಿ ಆಟಗಾರರನ್ನು ಪರಿಚಯಿಸಿ, ಕುಶಲೋಪರಿ ವಿನಿಯಮ ಮಾಡಿಕೊಂಡ ಮ್ಯಾಕ್ಸ್‌ವೆಲ್ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ಆಗಿರುವ ಮ್ಯಾಕ್ಸ್‌ವೆಲ್ ರಿವರ್ಸ್ ಶಾಟ್‌ಗಳ ಅಭ್ಯಾಸ ನಡೆಸಿರುವುದು ವಿಡಿಯೋದಲ್ಲಿದೆ.

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಏಪ್ರಿಲ್ 9ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಆರಂಭಿಕ ಪಂದ್ಯದಲ್ಲೇ ಗೆದ್ದು ಶುಭಾರಂಭ ಕಾಣುವ ಯೋಚನೆಯಲ್ಲಿ ವಿರಾಟ್ ಕೊಹ್ಲಿ ಪಡೆಯಿದೆ.

ಈ ಬಾರಿ ಆರ್‌ಸಿಬಿಗೆ ಉತ್ತಮ ಆಲ್‌ ರೌಂಡರ್‌ಗಳು ಸೇರ್ಪಡೆಯಾಗಿದ್ದಾರೆ. ಮ್ಯಾಕ್ಸ್‌ವೆಲ್ ಅಲ್ಲದೆ ಆಸ್ಟ್ರೇಲಿಯಾದ ಡಾನ್ ಕ್ರಿಸ್ಚಿಯನ್, ಡೇನಿಯಮ್ ಸ್ಯಾಮ್ಸ್, ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ಈ ಬಾರಿ ಆರ್‌ಸಿಬಿಗೆ ಬಲ ತುಂಬಲಿದ್ದಾರೆ. ಇನ್ನು ನ್ಯೂಜಿಲೆಂಡ್‌ ಫಿನ್ ಅಲೆನ್, ಭಾರತದ ಯುವ ಬ್ಯಾಟ್ಸ್‌ಮನ್‌ ರಜತ್ ಪಾಟಿದಾರ್, ಮೊಹಮ್ಮದ್ ಅಝರುದ್ದೀನ್ ಬಗ್ಗೆಯೂ ಹೆಚ್ಚಿನ ನಿರೀಕ್ಷೆಗಳಿವೆ.

This News Article Is A Copy Of MYKHEL