ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್‌ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm