ಬ್ರೇಕಿಂಗ್ ನ್ಯೂಸ್
19-04-21 04:23 pm source: MYKHEL ಕ್ರೀಡೆ
ಚೆನ್ನೈ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದಡಿಯಲ್ಲಿರುವ ಸಿಎಸ್‌ಕೆ ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡಿದೆ.
ಕಳೆದ ಬಾರಿ ಸಿಎಸ್‌ಕೆ ತಂಡದಲ್ಲಿ ಆಲ್ ರೌಂಡರ್ ಸುರೇಶ್ ರೈನಾ ಆಡಿರಲಿಲ್ಲ. ಈ ಬಾರಿ ಚೆನ್ನೈಗೆ ಬಲ ತುಂಬಲು ರೈನಾ ತಂಡ ಸೇರಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಸೀಸನ್‌ನಲ್ಲಿ ಸಿಎಸ್‌ಕೆ ತಂಡದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಕೂಡ ಇದ್ದಾರೆ.
ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಫ್ರಾಂಚೈಸಿ ಒಂದು ಮುದ್ದಾದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿತ್ತು. ರಾಬಿನ್ ಉತ್ತಪ್ಪ ಅವರ ಪುಟಾಣಿ ಪುತ್ರ ನೀಲ್ ನೋಲನ್ ಯೆಲ್ಲೋ ಆರ್ಮಿಯ ಜೆರ್ಸಿ ಹಾಕಿ ಬ್ಯಾಟ್ ಹಿಡಿದುಕೊಂಡಿದ್ದ ಚಿತ್ರವದು.
ಟ್ವಿಟರ್‌ನಲ್ಲಿ ಫೋಟೋ ಜೊತೆ 'ಸಿಂಹದ ಮರಿ ನೋಲನ್‌ಗೆ ವಿಶಿಲ್ ಹೊಡೆಯಿರಿ' ಎಂದು ಬರೆದುಕೊಳ್ಳಲಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವನ್ನು ಉತ್ತಪ್ಪ ಕೂಡ ತನ್ನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹಾಕಿಕೊಂಡಿದ್ದಾರೆ. 'ಮಗನಿಗೆ ಜೆರ್ಸಿ ಇಷ್ಟವಾಗಿದೆ. ಆತ ಹೋದಲ್ಲೆಲ್ಲಾ ಇದನ್ನು ಕೊಂಡೊಯ್ಯುತ್ತಾನೆ' ಎಂದು ಉತ್ತಪ್ಪ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm