ಐಪಿಎಲ್ 2021: ಮೂರು ವಿಶೇಷ ಮೈಲಿಗಲ್ಲುಗಳನ್ನು ನಿರ್ಮಿಸಲು ವಿರಾಟ್ ಕೊಹ್ಲಿ ಸಜ್ಜು

27-04-21 07:42 pm       Source: MYKHEL   ಕ್ರೀಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಈ ಬಾರಿಯ ಐಪಿಎಲ್ ಉತ್ತಮವಾದ ಟೂರ್ನಿ ಎಂದೇ ಹೇಳಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಈ ಬಾರಿಯ ಐಪಿಎಲ್ ಉತ್ತಮವಾದ ಟೂರ್ನಿ ಎಂದೇ ಹೇಳಬಹುದು. ಟೂರ್ನಿಯ ಮೊದಲ 4 ಪಂದ್ಯಗಳಲ್ಲಿ ಸತತವಾಗಿ ಜಯಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಐದನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲುಂಡಿತು. ಹೀಗಾಗಿ ಮಂಗಳವಾರ (ಏಪ್ರಿಲ್ 27 ) ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ನಡೆಯಲಿರುವ ಈ ಪಂದ್ಯವನ್ನು ಗೆದ್ದು ಮತ್ತೆ ಯಶಸ್ಸಿನ ಹಾದಿಯನ್ನು ಹಿಡಿಯಲು ವಿರಾಟ್ ಕೊಹ್ಲಿ ಬಳಗ ಹಾತೊರೆಯುತ್ತಿದೆ. ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇದುವರೆಗೂ ಒಟ್ಟು ತಲಾ 5 ಪಂದ್ಯಗಳನ್ನಾಡಿದ್ದು ನಾಲ್ಕು ಪಂದ್ಯಗಳಲ್ಲಿ ಜಯಗಳಿಸಿ ಒಂದು ಪಂದ್ಯದಲ್ಲಿ ಸೋತಿವೆ. ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಡೆಲ್ಲಿ ಹಾಗೂ ಮೂರನೇ ಸ್ಥಾನದಲ್ಲಿರುವ ಬೆಂಗಳೂರು ತಂಡಗಳ ನಡುವಿನ ಈ ಕದನದಲ್ಲಿ ಗೆದ್ದವರು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

ಇನ್ನು ವೈಯಕ್ತಿಕವಾಗಿ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಉತ್ತಮವಾಗಿ ಪ್ರದರ್ಶನವನ್ನು ನೀಡುತ್ತಿದ್ದಾರೆ. ಇಲ್ಲಿಯವರೆಗೂ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 151 ರನ್ ಗಳಿಸಿದ್ದಾರೆ. ಚೆನ್ನೈ ವಿರುದ್ಧದ ಸೋಲಿನ ಬಳಿಕ ಡೆಲ್ಲಿ ವಿರುದ್ಧ ಗೆಲುವು ಸಾಧಿಸಲೇಬೇಕೆಂಬ ಯೋಜನೆಯಲ್ಲಿರುವ ವಿರಾಟ್ ಕೊಹ್ಲಿ ಅವರು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮೂರು ಭಿನ್ನವಾದ ದಾಖಲೆಗಳನ್ನು ನಿರ್ಮಿಸಲು ಸಜ್ಜಾಗಿದ್ದಾರೆ. ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮಾಡಬಹುದಾದ ಆ 3 ದಾಖಲೆಗಳ ವಿವರ ಮುಂದೆ ಇದೆ ಓದಿ.

IPL 2021 : 3 milestones awaiting RCB captain Virat Kohli this season

1. ಆರ್‌ಸಿಬಿ ಪರ 200 ಪಂದ್ಯಗಳು :

ಐಪಿಎಲ್ ಆರಂಭವಾದಾಗಿನಿಂದಲೂ ಸಹ ಇಲ್ಲಿಯವರೆಗೂ ಕೇವಲ ಒಂದೇ ಒಂದು ಫ್ರಾಂಚೈಸಿ ಪರ ಆಟವಾಡುತ್ತಿರುವ ಆಟಗಾರ ಎಂದರೆ ಅದು ವಿರಾಟ್ ಕೊಹ್ಲಿ. ಐಪಿಎಲ್ ಆರಂಭವಾದಾಗಿನಿಂದ ಇಲ್ಲಿಯವರೆಗೂ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 197 ಪಂದ್ಯಗಳನ್ನಾಡಿದ್ದು ಪ್ರಸ್ತುತ ಐಪಿಎಲ್ ಟೂರ್ನಿಯ ಮೂಲಕ 200 ಪಂದ್ಯಗಳನ್ನು ಪೂರೈಸಲಿದ್ದಾರೆ.

2. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1000 ರನ್ಸ್ :

ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಇದುವರೆಗೂ ಒಟ್ಟು 23 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿದ್ದು 897 ರನ್ ಗಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 1000 ರನ್ ಪೂರೈಸಲು ವಿರಾಟ್ ಕೊಹ್ಲಿಗೆ 103 ರನ್‌ಗಳ ಅಗತ್ಯವಿದ್ದು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಈ ವಿಶೇಷ ಮೈಲಿಗಲ್ಲನ್ನು ನಿರ್ಮಿಸುವ ಸಾಧ್ಯತೆಯಿದೆ.

IPL 2021 : 3 milestones awaiting RCB captain Virat Kohli this season

3. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 550 ಬೌಂಡರಿಗಳು :

ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಒಟ್ಟು 519 ಬೌಂಡರಿಗಳನ್ನು ಸಿಡಿಸಿದ್ದಾರೆ. 550 ಬೌಂಡರಿ ಸಿಡಿಸಲು ವಿರಾಟ್ ಕೊಹ್ಲಿ ಅವರಿಗೆ ಇನ್ನೂ 31 ಬೌಂಡರಿಗಳ ಅಗತ್ಯತೆಯಿದ್ದು, ಒಂದುವೇಳೆ ವಿರಾಟ್ ಈ ಮೈಲಿಗಲ್ಲನ್ನು ಮುಟ್ಟಿದರೆ ಡೇವಿಡ್ ವಾರ್ನರ್ ಬಳಿಕ 550 ಬೌಂಡರಿ ಬಾರಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ.

This News Article Is A Copy Of MYKHEL