ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಆಸ್ಪತ್ರೆಗೆ ದಾಖಲು

04-05-21 04:21 pm       Source: MYKHEL Sadashiva   ಕ್ರೀಡೆ

ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಪ್ರಕಾಶ್ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರು: ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಸದ್ಯ ಪ್ರಕಾಶ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.

ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ, ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ಕಂಡುಬಂದಿತ್ತು,' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್

'ಪ್ರಕಾಶ್ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಅವರ ಎಲ್ಲಾ ಪ್ಯಾರಾಮೀಟರ್‌ಗಳೂ ಸರಿಯಾಗಿವೆ. ಅವರ ಪತ್ನಿ ಮತ್ತು ಪುತ್ರಿ ಸದ್ಯ ಮನೆಯಲ್ಲಿದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಚ್‌ಚಾರ್ಜ್‌ ಆಗಲಿದ್ದಾರೆ,' ಎಂದು ವಿಮಲ್ ಹೇಳಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ತಂದೆ ಈ ಪ್ರಕಾಶ್ ಪಡುಕೋಣೆ.

ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿರುವ ಪ್ರಕಾಶ್, 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು. ಪ್ರಕಾಶ್‌ಗೀಗ 65ರ ಹರೆಯ.

This News Article Is A Copy Of MYKHEL