ಕೊರೊನಾ ಪರಿಹಾರಕ್ಕೆ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಆರ್ಥಿಕ ನೆರವು

07-05-21 02:32 pm       MYKHEL: Sadashiva   ಕ್ರೀಡೆ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೋವಿಡ್-19 ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೋವಿಡ್-19 ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೋವಿಡ್-19 ದ್ವಿತೀಯ ಅಲೆಯಿಂದಾಗಿ ಭಾರತದಲ್ಲಿ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ಕೊಹ್ಲಿ-ಅನುಷ್ಕಾ ದಂಪತಿ ನೆರವಿಗೆ ಮುಂದಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು ಮತ್ತು ಆಕ್ಸಿಜನ್ ಸಿಲಿಂಡರ್‌ಗಳ ಕೊರತೆ ಎದುರಾಗುತ್ತಿದೆ. ಹೀಗಾಗಿ ಅನೇಕ ಕ್ರೀಡಾಪಟುಗಳು ಕೊರೊನಾ ಪರಿಹಾರಕ್ಕೆ ದೇಣಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

ಕೋವಿಡ್-19 ಪ್ರಕರಣಗಳು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 14ನೇ ಆವೃತ್ತಿಯ ಬಯೋಬಬಲ್ ಒಳಗೂ ಪ್ರವೇಶಿಸಿ ಆತಂಕ ಸೃಷ್ಟಿಸಿತ್ತು. ಹೀಗಾಗಿ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ನಗದು ಶ್ರೀಮಂತ ಟೂರ್ನಿ ಅಮಾನತುಗೊಂಡಿದೆ.

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅಲ್ಲೂ ತಂಡದ ಜೊತೆಗಿದ್ದು ಜನರಿಗೆ ಕೊರೊನಾ ಜಾಗೃತಿ ಮೂಡಿಸುವಲ್ಲಿ ಕೈ ಸೇರಿಸಿದ್ದರು. ಕೊರೊನಾ ಜಾಗೃತಿ ಸಲುವಾಗಿಯೇ ಆರ್‌ಸಿಬಿ ನೀಲಿ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿತ್ತು. ಆದರೆ ಅಷ್ಟರಲ್ಲಾಗಲೇ ಐಪಿಎಲ್ ಅಮಾನತೆಂದು ಘೋಷಿಸಲ್ಪಟ್ಟಿತು.

(Kannada Copy of  Mykhel Kannada)