ಕೋಲ್ಕತ್ತಾ ನೈಟ್ ರೈಡರ್ಸ್‌ನ ಟಿಮ್ ಸೀಫರ್ಟ್‌ಗೆ ಕೊರೊನಾ

08-05-21 11:52 am       MYKHEL: Sadashiva   ಕ್ರೀಡೆ

ಐಪಿಎಲ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ ಟಿಮ್ ಸೀಫರ್ಟ್‌ಗೆ ಕೋವಿಡ್-19 ಪಾಸಿಟಿವ್ ಬಂದಿದೆ.

ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ ಟಿಮ್ ಸೀಫರ್ಟ್‌ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಇಲ್ಲಿಗೆ ಕೋಲ್ಕತ್ತಾದ ಒಟ್ಟು ಮೂವರು ಆಟಗಾರರು ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾದಂತಾಗಿದೆ.

2021ರ ಐಪಿಎಲ್ ಅಮಾನತಾಗಿರುವುದರಿಂದ ವಿದೇಶಿ ಆಟಗಾರರೆಲ್ಲ ಅವರವರ ದೇಶಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ವಿಕೆಟ್‌ ಕೀಪರ್ ಕಮ್ ಬ್ಯಾಟ್ಸ್‌ಮನ್‌ ಟಿಮ್ ಸೀಫರ್ಟ್‌ಗೆ ಚಾರ್ಟರ್ಡ್ ವಿಮಾನದಲ್ಲಿ ಇತರ ಆಟಗಾರರೊಂದಿಗೆ ತವರಿಗೆ ವಾಪಸ್

ಐಪಿಎಲ್ 14ನೇ ಆವೃತ್ತಿ ನಡೆಯುತ್ತಿದ್ದಾಗ ಕೋಲ್ಕತ್ತಾ ನೈಟ್ ರೈಡರ್ಸ್‌ನ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್‌ಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಇನ್ನು ಸನ್ ರೈಸರ್ಸ್ ಹೈದರಾಬಾದ್‌ನ ವೃದ್ಧಿಮಾನ್ ಸಾಹ, ಡೆಲ್ಲಿ ಕ್ಯಾಪಿಟಲ್ಸ್‌ನ ಅಮಿತ್ ಮಿಶ್ರಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ನ ಬೌಲಿಂಗ್‌ ಕೋಚ್‌ ಲಕ್ಷ್ಮೀಪತಿ ಬಾಲಾಜಿಗೂ ಸೋಂಕು ತಗುಲಿದ್ದರಿಂದ ಈ ಬಾರಿಯ ಐಪಿಎಲ್ ಅನ್ನು ಸ್ಥಗಿತಗೊಳಿಸಲಾಯ್ತು.

ಸೀಫರ್ಟ್ ಈಗ ಅಹ್ಮದಾಬಾದ್‌ನಲ್ಲಿದ್ದು ಐಸೊಲೇಶನ್ ಪಾಲಿಸುತ್ತಿದ್ದಾರೆ. ಅವರನ್ನು ಇನ್ನು ಚೆನ್ನೈಗೆ ಕರೆತರಲಾಗುತ್ತಿದೆ. ನ್ಯೂಜಿಲೆಂಡ್‌ಗೆ ವಾಪಸ್ಸಾಗುವ ಮುನ್ನ ಸೀಫರ್ಟ್ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

(Kannada Copy of  Mykhel Kannada)