ಬ್ರೇಕಿಂಗ್ ನ್ಯೂಸ್
20-05-21 04:12 pm MYKHEL: Srinivasa A ಕ್ರೀಡೆ
ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಸೆಣಸಾಡಲಿದೆ ಹಾಗೂ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಂಡು ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಈಗಾಗಲೇ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಇದೇ ಸಮಯದಲ್ಲಿ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳನ್ನು ಆಯೋಜಿಸಲಾಗಿದ್ದು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಆಟಗಾರರನ್ನು ಬಿಟ್ಟು ಉಳಿದ ಸ್ಟಾರ್ ಆಟಗಾರರ ತಂಡವೊಂದನ್ನು ಕಟ್ಟಿ ಲಂಕಾ ಪ್ರವಾಸಕ್ಕೆ ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ. ಇನ್ನು ಈ ಪ್ರವಾಸದ ವಿಶೇಷತೆ ಏನೆಂದರೆ ರಾಹುಲ್ ದ್ರಾವಿಡ್ ಮಾರ್ಗದರ್ಶನ. ಹೌದು ರಾಹುಲ್ ದ್ರಾವಿಡ್ ಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ತಂಡದ ಕೋಚ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ.
ಟೀಮ್ ಇಂಡಿಯಾದ ಕೋಚ್‌ಗಳಾದ ರವಿಶಾಸ್ತ್ರಿ, ಭರತ್ ಅರುಣ್ ಹಾಗೂ ವಿಕ್ರಂ ರಾಥೋರ್ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಕಾರಣ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಕೋಚ್ ಆಗಿ ತೆರಳಲಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಎ ತಂಡಕ್ಕೆ ಮಾರ್ಗದರ್ಶನವನ್ನು ನೀಡಿರುವ ಅನುಭವವಿರುವ ರಾಹುಲ್ ದ್ರಾವಿಡ್ ಅಂಡರ್- 19 ತಂಡಕ್ಕೂ ಸಹ ಕೋಚಿಂಗ್ ನೀಡಿದ್ದಾರೆ. ಹೀಗಾಗಿ ಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಯುವ ಆಟಗಾರರಿಗೆ ದ್ರಾವಿಡ್ ಮಾರ್ಗದರ್ಶನದ ಅನುಭವ ಮೊದಲೇ ಇರುವುದರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅಂಡರ್-19 ತಂಡದಲ್ಲಿ ಈಗಾಗಲೇ ಹಲವಾರು ಯುವಪ್ರತಿಭೆಗಳನ್ನು ತಯಾರಿಸಿರುವ ದ್ರಾವಿಡ್ ಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ತಂಡವನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎನ್ನಲಾಗುತ್ತಿದೆ.
(Kannada Copy of Mykhel Kannada)
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm