ಬ್ರೇಕಿಂಗ್ ನ್ಯೂಸ್
02-06-21 02:40 pm MYKHEL: Srinivasa A ಕ್ರೀಡೆ
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್‌ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್‌ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
14-12-25 03:19 pm
Bangalore Correspondent
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 09:12 pm
Mangalore Correspondent
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm