ಐಸಿಸಿ ಟೆಸ್ಟ್ ಶ್ರೇಯಾಂಕ: ವಿಲಿಯಮ್ಸನ್ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಸ್ಮಿತ್, 4ನೇ ಸ್ಥಾನದಲ್ಲಿ ಕೊಹ್ಲಿ

16-06-21 03:59 pm       MYKHEL: Madhukara Shetty   ಕ್ರೀಡೆ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನದ ಏರಿಕೆ ಕಂಡಿದ್ದು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿದ್ದ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಸ್ಟೀವನ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್‌ ಪ್ರಕಟಿಸಿದ್ದು ಕೆಲ ಪ್ರಮುಖ ಬದಲಾವಣೆಗಳು ಆಗಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನದ ಏರಿಕೆ ಕಂಡಿದ್ದು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿದ್ದ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಸ್ಟೀವನ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಕಳೆದ ಭಾರತದ ವಿರುದ್ಧದ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಬಳಿಕ ಮೊದಲ ಸ್ಥಾನದಿಂದ ಕೆಳಗಿಳಿದಿದ್ದರು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈ ಸ್ಥಾನವನ್ನು ಆಕ್ರಮಿಸಿದ್ದರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದರು. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್‌ಗಳಿಸಿದ್ದ ವೇಳೆ ಕೇನ್ ಗಾಯಗೊಂಡಿದ್ದರು. ಹೀಗಾಗಿ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಶ್ರೇಯಾಂಕ ಪಟ್ಟಿಯಲ್ಲಿ 891 ಅಂಕಗಳಿಸಿರುವ ಸ್ಟೀವ್ ಸ್ಮಿತ್ ಅವರಿಗಿಂತ 5 ಅಂಕಗಳ ಹಿನ್ನೆಡೆಯಲ್ಲಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್ ಚೇತೇಶ್ವರ್ ಪೂಜಾರ ಅವರೊಂದಿಗೆ 12ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 141 ರನ್‌ಗಳಿಸಿ ಇನ್ನಿಂಗ್ಸ್ ಹಾಗೂ 63 ರನ್‌ಗಳ ಅಂತರದಿಂದ ಗೆಲುವಿಗೆ ಕಾರಣರಾಗಿದ್ದರು. ಇನ್ನು ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಡಾ ಕೂಡ ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು 7ನೇ ಸ್ಥಾನಕ್ಕೇರಿದ್ದಾರೆ.

(Kannada Copy of Mykhel Kannada)