ಬ್ರೇಕಿಂಗ್ ನ್ಯೂಸ್
29-06-21 04:03 pm MYKHEL: Madhukara Shetty ಕ್ರೀಡೆ
ಭಾರತದ ಸ್ಟಾರ್ ಆರ್ಚರ್ ದೀಪಿಕಾ ಕುಮಾರಿ ಮತ್ತೊಂದು ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಆರ್ಚರಿ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದಿರುವ ದೀಪಿಕಾ ಕುಮಾರಿ ಈಗ ಜಾಗತಿಕ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ. ಈ ಮೂಲಕ 2012ರ ನಂತರ ಮೊದಲ ಬಾರಿಗೆ ಈ ಸಾಧನೆ ಮಾಡಿದ್ದಾರೆ.
ಭಾನುವಾರ ದೀಪಿಕಾ ಕುಮಾರಿ ಮೂರು ರಿಕ್ಯೂರ್ವ್ ವಿಭಾಗಗಳಲ್ಲಿ ಚಿನ್ನವನ್ನು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ತಂಡ, ವೈಯಕ್ತಿಕ ಹಾಗೂ ಮಿಕ್ಸ್‌ಡ್ ಜೋಡಿ ವಿಭಾಗದಲ್ಲಿ ದೀಪಿಕಾ ಗೆಲುವು ಸಾಧಿಸಿದ್ದರು. ಈ ಮೂಲಕ ಭಾರತ ತಂಡದ ಪರವಾಗಿ ವಿಶೇಷ ಸಾಧನೆಯನ್ನು ದೀಪಿಕಾ ಮಾಡಿದ್ದಾರೆ.

ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಗೋಲ್ ದಾಖಲೆ ಮುರಿದ ಲಿಯೋನೆಲ್ ಮೆಸ್ಸಿ ವಿಶೇಷವೆಂದರೆ ದೀಪಿಕಾ ಕುಮಾರಿ ಭಾನುವಾರ ಕೇವಲ 5 ಗಂಟೆಗಳ ಅಂತರದಲ್ಲಿ ಮೂರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಿಕ್ಯೂರ್ವ್ ವಿಭಾಗದಲ್ಲಿ ಭಾರತ ಕ್ಲೀನ್‌ಸ್ವೀಪ್ ಸಾಧನೆ ಮಾಡಲು ಸಾಧ್ಯವಾಗಿತ್ತು. ಈ ಫಾರ್ಮ್‌ಅನ್ನು ತಾನು ಮುಂದುವರಿಸುವ ವಿಶ್ವಾಸವನ್ನು ದೀಪಿಕಾ ಕುಮಾರಿ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಆರ್ಚರಿ ವಿಶ್ವಕಪ್‌ನಲ್ಲಿ ದೀಪಿಕಾ ಈವರೆಗೆ 9 ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದರೆ, 12 ಬೆಳ್ಳಿ ಹಾಗೂ 7 ಕಂಚಿನ ಪದಕವನ್ನು ಜಯಿಸಿದ್ದಾರೆ. ಎರಡು ಬಾರಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ. ಇದಕ್ಕೂ ಮುನ್ನ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. 2012 ಹಾಗೂ 2016ರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ದೀಪಿಕಾ ಪ್ರತಿನಿಧಿಸಿದ್ದಾರೆ. ಈಗ ಮುಂದಿನ ತಿಂಗಳು ನಡೆಯುವ ಟೋಕಿಯೋ ಒಲಿಂಪಿಕ್ಸ್‌ಗೂ ದೀಪಿಕಾ ಕುಮಾರಿ ಆಯ್ಕೆಯಾಗಿದ್ದಾರೆ. ಮಹಿಳಾ ವಿಭಾಗದಲ್ಲಿ ಆಯ್ಕೆಯಾಗಿರುವ ಭಾರತದ ಏಕೈಕ ಆರ್ಚರ್ ಆಗಿದ್ದಾರೆ ದೀಪಿಕಾ ಕುಮಾರಿ.
ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ನಲ್ಲಿ ಮಹಿಳಾ ವಿಭಾಗದ ಸ್ಪರ್ಧೆಯಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕಾತ್ ಮತ್ತು ಕೋಮಲಿಕಾ ಬ್ಯಾರಿ ಅವರ ತಂಡ ಮೆಕ್ಸಿಕೋ ತಂಡವನ್ನು ಮಣಿಸಿ ಚಿನ್ನವನ್ನು ಗೆದ್ದುಕೊಂಡಿತು. ಅದಾದ ನಂತರ ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ತನ್ನ ಜೋಡಿ ಅತನು ದಾಸ್ ಜೊತೆಗೆ ನೆದರ್ಲ್ಯಾಂಡ್ ತಂಡವನ್ನು ಮಣಿಸಿ ಚಿನ್ನದ ಪದಕವನ್ನು ಗೆದ್ದರು. 5-3 ಅಂತರದಿಂದ ಈ ಗೆಲುವು ಸಾಧಿಸಿತು. ಈ ಎರಡು ಚಿನ್ನದ ಪದಕದ ನಂತರ ವೈಯ್ಯಕ್ತಿಕ ವಿಭಾಗದಲ್ಲಿಯೂ ದೀಪಿಕಾ ಕುಮಾರಿ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಕ್ಕಿದರು. ರಷ್ಯಾದ 17ನೇ ಶ್ರೇಯಾಂಕಿತೆ ಎಲೆನಾ ಒಸಿಪೋವಾ ಅವರನ್ನು 6-0 ಅಂತರದಿಂದ ಮಣಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಮೂಲಕ ದೀಪಿಕಾ ಜಾಗತಿಕ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.
(Kannada Copy of Mykhel Kannada)
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm