ಬ್ರೇಕಿಂಗ್ ನ್ಯೂಸ್
01-08-21 08:11 pm Headline Karnataka News Network ಕ್ರೀಡೆ
ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 2ನೇ ಪದಕ ದಕ್ಕಿದೆ. ನಿನ್ನೆ ಸೆಮಿ ಫೈನಲ್ನಲ್ಲಿ ಸೋಲುಂಡಿದ್ದ ಪಿ.ವಿ.ಸಿಂಧು ಇಂದು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಚೀನಾದ ಹಿ ಬಿಂಗ್ಜಿಯೋ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಸಿಂಧು ಮುತ್ತಿಟ್ಟಿದ್ದಾರೆ.
ಇಂದು ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚೀನಾ ಆಟಗಾರ್ತಿಯನ್ನು 21-13, 21-15 ನೇರ ಸೆಟ್ಗಳಿಂದ ಮಣಿಸುವ ಮೂಲಕ ಕಂಚಿನ ಪದಕವನ್ನು ಸಿಂಧು ತಮ್ಮದಾಗಿಸಿಕೊಂಡಿದ್ದಾರೆ. ಪಿ.ವಿ.ಸಿಂಧು ಒಲಿಂಪಿಕ್ಸ್‌ನಲ್ಲಿ 2ನೇ ಬಾರಿ ಪದಕ ಗೆಲ್ಲುವ ಮೂಲಕ ಹೊಸ ಸಾಧನೆಗೆ ಪಾತ್ರರಾಗಿದ್ದಾರೆ. 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಬೆಳ್ಳಿ ಪದಕವನ್ನು ಗೆದ್ದಿದ್ದರು. ಈಗ ಕಂಚಿನ ಪದಕದೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ 2ನೇ ಪದಕ ತನ್ನದಾಗಿಸಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 62ನೇ ಸ್ಥಾನಕ್ಕೆ ಏರಿದೆ. ವೇಯ್ಟ್ ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
ನಿನ್ನೆ ಸೆಮಿ ಫೈನಲ್ನಲ್ಲಿ ಚೈನೀಸ್ ತೈಪೆಯ ತೈ ವಿರುದ್ಧ ಪರಾಭವಗೊಂಡಿದ್ದರು. ಚಿನ್ನದ ಪದಕ ಸಿಂಧು ಕೈ ತಪ್ಪಿತ್ತು. ಮಹಿಳಾ ಸಿಂಗಲ್ನಲ್ಲಿ ಸೆಮಿಸ್ ಪ್ರವೇಶಿಸಿದ್ದ ಸಿಂಧು ಚಿನ್ನದ ಪದಕ ನಿರೀಕ್ಷೆಯನ್ನು ಹುಟ್ಟಿಸಿದ್ದರು. ಆದರೆ ಚೈನೀಸ್ ತೈಪೆಯ ತೈ ಜು ಯಿಂಗ್ ವಿರುದ್ಧ 21-18, 21-12 ನೇರ ಸೆಟ್ ಗಳಲ್ಲಿ ಸಿಂಧು ಸೋಲನುಭವಿಸಿದರು.
ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲಲು ಪಿ.ವಿ. ಸಿಂಧುಗೆ ಗೋಪಿಚಂದ್ ದೀರ್ಘಕಾಲ ತರಬೇತಿ ನೀಡಿದ್ದರು. ಆದರೆ ಈ ಬಾರಿ ಗೋಪಿಚಂದ್ ಅಕಾಡೆಮಿ ತೊರೆದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ದಕ್ಷಿಣ ಕೊರಿಯಾದ ಪಾರ್ಕ್ ಟೇ ಸಾಂಗ್ ಎಂಬುವರ ಬಳಿ ಸಿಂಧು ಕೋಚಿಂಗ್ ಪಡೆದಿದ್ದಾರೆ.
PV Sindhu scripted history on Sunday as she defeated He Bing Jiao of China to become the first Indian woman to win two individual Olympic medals. Sindhu defeated He Bing Jiao 21-13 and 21-15 in the bronze medal match. Sindhu was clinical throughout the contest and didn't give her opponent any chance in the match. Sindhu had suffered a heart-breaking loss to world no.1 Tai Tzu Ying in the semi-final on Saturday. Sindhu lost the semi-final 18-21, 12-21.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm