ಬ್ರೇಕಿಂಗ್ ನ್ಯೂಸ್
01-08-20 10:39 am Headline Karnataka News Network ಕ್ರೀಡೆ
ಮುಂಬೈ: ಟೀ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಇದೀಗ ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಹಾಗೂ ಬಿಗ್ ಬಾಸ್‍ನ ಮಾಜಿ ಸ್ಪರ್ಧಿ ಹಾಗೂ ಡಾನ್ಸರ್ ನತಾಶಾ ಸ್ಟಾಂಕೋವಿಕ್ ದಂಪತಿಗೆ ಗುರುವಾರ ಗಂಡು ಮಗುವಾಗಿದೆ. ಗಂಡು ಮಗುವಿನ ತಂದೆಯಾದ ಖುಷಿಯನ್ನು ಪಾಂಡ್ಯ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನಮಗೆ ಗಂಡು ಮಗುವಿನ ಆಗಮನವಾಗಿದೆ ಎಂದು ಬರೆದುಕೊಂಡಿದ್ದರು. ಜೊತೆಗೆ ಪಾಂಡ್ಯ ಮಗುವಿನ ಕೈ ಹಿಡಿದುಕೊಂಡಿದ್ದು, ಪುತ್ರನ ಮುಖ ಕಾಣದ ಫೋಟೋವನ್ನು ಅಪ್ಲೋಡ್ ಮಾಡಿದ್ದರು.
ಇಂದು ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ತಮ್ಮ ಮಗನನ್ನು ಎರಡು ಕೈಗಳಿಂದ ಎತ್ತಿಕೊಂಡಿದ್ದು, ಮಗುವಿನ ಮುಖ ನೋಡುತ್ತಾ ಪಾಂಡ್ಯ ನಗುತ್ತಿದ್ದಾರೆ. ಈ ಫೋಟೋಗೆ “ದೇವರಿಂದ ಆಶೀರ್ವಾದ” ಎಂದು ಬರೆದಿದ್ದು, ನಮಸ್ಕಾರ ಮಾಡುವ ಮತ್ತು ಹಾರ್ಟ್ ಎಮೋಜಿಯನ್ನು ಹಾಕಿ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.
ಪಾಂಡ್ಯ ಫೋಟೋ ಅಪ್ಲೋಡ್ ಮಾಡಿದ ಒಂದು ಗಂಟೆಯಲ್ಲಿ 13 ಲಕ್ಷಕ್ಕೂ ಅಧಿಕ ಮಂದಿ ಲೈಕ್ಸ್ ಮಾಡಿದ್ದಾರೆ. ಜೊತೆ ಹಾರ್ದಿಕ್ ಪಾಂಡ್ಯಗೆ ಶುಭಾ ಕೋರುತ್ತಿದ್ದಾರೆ.
ಬಹು ಸಮಯದಿಂದ ಒಟ್ಟಿಗೆ ಓಡಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಸರ್ಬಿಯನ್ ಮಾಡೆಲ್, ನಟಿ ನತಾಶಾ ಸ್ಟಾಂಕೋವಿಕ್ ಹೊಸ ವರ್ಷದ ಮೊದಲ ದಿನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಕುರಿತ ವಿಡಿಯೋ ಹಾಗೂ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು.
ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್‍ಸ್ಟಾದಲ್ಲಿ ಗೆಳತಿ ನತಾಶಾರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದ ಪಾಂಡ್ಯ, “ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂಧವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ. ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ” ಎಂದು ಬರೆದುಕೊಂಡಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm