ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ 3ನೇ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್‌!

04-08-21 12:27 pm       Mykhel: Sadashiva   ಕ್ರೀಡೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ಲಭಿಸಿದೆ. ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್‌ ಕಂಚಿನ ಪದಕ ಗೆದ್ದಿದ್ದಾರೆ.

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ಲಭಿಸಿದೆ. ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್‌ ಕಂಚಿನ ಪದಕ ಗೆದ್ದಿದ್ದಾರೆ. ಬುಧವಾರ ನಡೆದ ಸೆಮಿಫೈನಲ್‌-1 ಪಂದ್ಯದಲ್ಲಿ ಟರ್ಕಿಯ ಬಾಕ್ಸರ್ ಬುಸೆನಾಜ್ ಸರ್ಮೆನೆಲಿ ಎದುರು ಲವ್ಲಿನಾ 0-5ರ ಸೋಲಿನೊಂದಿಗೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ತನ್ನ ಸ್ಪರ್ಧೆ ಮುಗಿಸಿದ್ದಾರೆ. ಆದರೆ ಭಾರತಕ್ಕೆ ಮೂರನೇ ಪದಕದ ಸಂಭ್ರಮ ಸಿಕ್ಕಿದೆ.

ಮಹಿಳೆಯರ 69 ಕೆಜಿ ವಿಭಾಗದ ಬಾಕ್ಸಿಂಗ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವ್ಲಿನಾ ಬೊರ್ಗೊಹೈನ್ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 4-1 ಅಂತರದಲ್ಲಿ ಜಯ ಗಳಿಸಿದ್ದರು. ಈ ಗೆಲುವಿನೊಂದಿಗೆ ಭಾರತಕ್ಕೆ ಕಂಚಿನ ಪದಕ ಗ್ಯಾರಂಟಿಯಾಗಿತ್ತು. ಸೆಮಿಫೈನಲ್‌ನಲ್ಲಿ ಲವ್ಲಿನಾ ಗೆದ್ದಿದ್ದರೆ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಅವಕಾಶವಿತ್ತು.



ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳಾ ವೇಟ್ ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಪಿವಿ ಸಿಂಧು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದರು. ಈಗ ಲವ್ಲಿನಾ ಭಾರಕ್ಕೆ ಮತ್ತೊಂದು ಕಂಚಿನ ಮೆರಗು ತಂಡದಿದ್ದಾರೆ. ಇಲ್ಲಿಗೆ ಒಟ್ಟು ಮೂರು ಪಕದಗಳು ಲಭಿಸಿದಂತಾಗಿವೆ.

(Kannada Copy of Mykhel Kannada)