ಭಾರತ vs ಇಂಗ್ಲೆಂಡ್ 4ನೇ ಟೆಸ್ಟ್: ಐದನೇ ದಿನದಾಟಕ್ಕೆ ಮಳೆಯ ಅಡ್ಡಿ ?

06-09-21 02:14 pm       My Khel Kannada   ಕ್ರೀಡೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು, ಸದ್ಯ ನಾಲ್ಕನೇ ಟೆಸ್ಟ್ ಪಂದ್ಯ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು, ಸದ್ಯ ನಾಲ್ಕನೇ ಟೆಸ್ಟ್ ಪಂದ್ಯ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಗಳಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಪ್ರಸ್ತುತ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ನಿರೀಕ್ಷೆ ಮತ್ತು ಕುತೂಹಲಗಳು ಹೆಚ್ಚಿವೆ.

ಇನ್ನು ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಮುಗಿಯುವ ಹಂತಕ್ಕೆ ತಲುಪಿದ್ದು ಇಂದು ( ಸೆಪ್ಟೆಂಬರ್ 6 ) ಕೊನೆಯ ದಿನದಾಟ ನಡೆಯಲಿದೆ. ಮೊದಲನೇ ಇನ್ನಿಂಗ್ಸ್‌ನಲ್ಲಿ 191 ರನ್‌ಗಳಿಗೆ ಆಲ್ ಔಟ್ ಆಗಿ ಮಂಕಾಗಿದ್ದ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 466 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಗುರಿಯನ್ನು ನೀಡಿದ್ದು, ನಾಲ್ಕನೇ ದಿನದಂದು ತನ್ನ ಎರಡನೇ ಇನ್ನಿಂಗ್ಸ್‌ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 77 ರನ್ ಗಳಿಸಿದೆ. ಇನ್ನು ಸೆಪ್ಟೆಂಬರ್ 6ರ ಸೋಮವಾರದಂದು ನಡೆಯಲಿರುವ ಕೊನೆಯ ದಿನದಂದು ಇಂಗ್ಲೆಂಡ್ ತಂಡ ಪಂದ್ಯದಲ್ಲಿ ಜಯ ಸಾಧಿಸಬೇಕೆಂದರೆ 291 ರನ್‌ಗಳನ್ನು ಬಾರಿಸುವ ಅಗತ್ಯವಿದೆ.

ಸದ್ಯ ಇಂಗ್ಲೆಂಡ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿರುವ ರೊರಿ ಬರ್ನ್ಸ್ ಮತ್ತು ಹಸೀಬ್ ಹಮೀದ್ ಉತ್ತಮ ಆರಂಭವನ್ನೇ ಮಾಡಿದ್ದಾರೆ. ರೊರಿ ಬರ್ನ್ಸ್ 109 ಎಸೆತಗಳಲ್ಲಿ ಅಜೇಯ 31 ರನ್ ಬಾರಿಸಿದ್ದರೆ, ಇತ್ತ ಹಸೀಬ್ ಹಮೀದ್ ಅಜೇಯ 85 ಎಸೆತಗಳಲ್ಲಿ 43 ರನ್ ಕಲೆಹಾಕಿದ್ದಾರೆ. ಹೀಗೆ ಇಂಗ್ಲೆಂಡ್ ತಂಡದ ಆರಂಭಿಕರಾದ ರೊರಿ ಬರ್ನ್ಸ್ ಮತ್ತು ಹಸೀಬ್ ಹಮೀದ್ ಅವರ ಉತ್ತಮ ಆಟದ ನೆರವಿನಿಂದ ಯಾವುದೇ ವಿಕೆಟ್ ನಷ್ಟವಿಲ್ಲದೇ 77 ರನ್ ಗಳಿಸಿ ನಾಲ್ಕನೇ ದಿನದಾಟವನ್ನು ಇಂಗ್ಲೆಂಡ್ ಅಂತ್ಯಗೊಳಿಸಿದೆ. ಇದೀಗ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು ಐದನೇ ದಿನದಾಟದಂದು 90 ಓವರ್‌ಗಳಲ್ಲಿ 291 ರನ್ ಬಾರಿಸುವ ಅಗತ್ಯವಿದೆ. ಓವಲ್ ಪಿಚ್ ಸದ್ಯ ಬ್ಯಾಟ್ಸ್‌ಮನ್‌ಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು ಇಂಗ್ಲೆಂಡ್ ಕೈನಲ್ಲಿ ಇನ್ನೂ 10 ವಿಕೆಟ್‍ಗಳು ಇರುವುದರಿಂದ ಇಂಗ್ಲೆಂಡ್ ತಂಡ ಭಾರತ ನೀಡಿರುವ ಗುರಿಯನ್ನು ಬೆನ್ನತ್ತುವ ಸಾಧ್ಯತೆಗಳು ಹೆಚ್ಚಿವೆ. ಇತ್ತ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡವನ್ನು ಹೇರಿ ವೇಗವಾಗಿ ವಿಕೆಟ್ ಪಡೆದುಕೊಳ್ಳಬೇಕಾದ ಜವಾಬ್ದಾರಿ ಭಾರತೀಯ ಬೌಲರ್‌ಗಳ ಮೇಲಿದೆ. ಒಟ್ಟಿನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕೊನೆಯ ದಿನದಾಟ ದೊಡ್ಡ ಮಟ್ಟದ ಕುತೂಹಲವನ್ನು ಹುಟ್ಟುಹಾಕಿದ್ದು ಗೆಲುವು ಯಾರ ಪಾಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಹವಾಮಾನ ವರದಿ: ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಂದು ಸಂಪೂರ್ಣವಾಗಿ ಬಿಸಿಲಿನ ವಾತಾವರಣವಿತ್ತು. ಅದೇ ರೀತಿ ಐದನೇ ದಿನದಾಟದಂದೂ ಸಹ ಬಿಸಿಲಿನ ವಾತಾವರಣವಿರುವ ನಿರೀಕ್ಷೆಗಳು ಹೆಚ್ಚಿದೆ. ಐದನೇ ದಿನದಾಟದಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೋಡ ಕವಿದ ವಾತಾವರಣವಿರಲಿದ್ದು, 14% ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಕ್ಕ್ಯುವೆದರ್ ತಿಳಿಸಿದೆ.

India vs England fourth test day. 5 oval weather report.