ಐಪಿಎಲ್ ಮೊದಲ ವಾರದ ಬೆಸ್ಟ್ ಟೀಂ ಪ್ರಕಟ; ನಾಯಕ ಧೋನಿಯಲ್ಲ, ಯಾವ ಆರ್‌ಸಿಬಿ ಆಟಗಾರನೂ ಇಲ್ಲ!

28-09-21 09:52 pm       Source ; My Khel Kannada   ಕ್ರೀಡೆ

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಕೊರೋನಾವೈರಸ್ ಕಾಣಿಸಿಕೊಂಡ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿತ್ತು.

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಕೊರೋನಾವೈರಸ್ ಕಾಣಿಸಿಕೊಂಡ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿತ್ತು.

ಹೀಗೆ ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಯುಎಇಗೆ ಸ್ಥಳಾಂತರಿಸಲ್ಪಟ್ಟಿದ್ದು ಸೆಪ್ಟೆಂಬರ್ 19ರಿಂದ ಉಳಿದ ಪಂದ್ಯಗಳು ಆರಂಭವಾಗಿವೆ. ಹೀಗೆ ಸದ್ಯ ಯುಎಇಯಲ್ಲಿ ಯಾವುದೇ ಅಡೆತಡೆಯಿಲ್ಲದೆ ಸರಾಗವಾಗಿ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಮಾರ್ಗವನ್ನು ಸುಗಮವಾಗಿಸಿಕೊಂಡಿದೆ. ಹಾಗೂ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಮೊದಲ ಭಾಗದಂತೆಯೇ ದ್ವಿತೀಯ ಭಾಗದಲ್ಲಿಯೂ ಉತ್ತಮ ಪ್ರದರ್ಶನವನ್ನು ಮುಂದುವರಿಸಿದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಉಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಎಇ ಚರಣದ ಮೊದಲ ಕೆಲ ಪಂದ್ಯಗಳಲ್ಲಿ ಸೋಲುವುದರ ಮೂಲಕ ಮುಗ್ಗರಿಸಿತಾದರೂ ಮುಂಬೈ ಇಂಡಿಯನ್ಸ್ ವಿರುದ್ಧದ ಭರ್ಜರಿ ಗೆಲುವಿನ ಮೂಲಕ ಮತ್ತೆ ಯಶಸ್ಸಿನ ಹಾದಿಗೆ ಮರಳಿದೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಕಳಪೆಯಾಗಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯಾರ್ಧದಲ್ಲಿ ಪುಟಿದೆದ್ದಿದ್ದು ಸಾಲು ಸಾಲು ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯಾರ್ಧದಲ್ಲಿ ವಿವಿಧ ತಂಡಗಳು ಉತ್ತಮ ಪ್ರದರ್ಶನವನ್ನು ನೀಡಿದ್ದರೆ, ಇನ್ನೂ ಕೆಲ ತಂಡಗಳು ಕಳಪೆ ಪ್ರದರ್ಶನ ನೀಡಿದ್ದು ಮುಂದಿನ ಪಂದ್ಯಗಳಲ್ಲಿ ಜಯಗಳಿಸುವುದರ ಮೂಲಕ ಮಾಡಿ ಪ್ಲೇ ಆಫ್ ಹಂತವನ್ನು ತಲುಪುವ ಪ್ರಯತ್ನದಲ್ಲಿವೆ. ಹೀಗೆ ಯುಎಇ ಚರಣದ ಮೊದಲ ವಾರದಲ್ಲಿ ( ಸೆಪ್ಟೆಂಬರ್ 19ರಿಂದ ಸೆಪ್ಟೆಂಬರ್ 26 ) ಉತ್ತಮ ಪ್ರದರ್ಶನ ನೀಡಿದ ಎಲ್ಲಾ ತಂಡಗಳ ಆಟಗಾರರನ್ನು ಸೇರಿಸಿ ಅತ್ಯುತ್ತಮ ತಂಡವನ್ನು ರಚಿಸಲಾಗಿದೆ. ಹೀಗೆ ರಚಿಸಲಾದ ಐಪಿಎಲ್ ದ್ವಿತೀಯಾರ್ಧದ ಮೊದಲ ವಾರದ ಅತ್ಯುತ್ತಮ ತಂಡದ ಕುರಿತಾದ ಮಾಹಿತಿ ಮುಂದಿದೆ ಓದಿ..

ಐಪಿಎಲ್ ಯುಎಇ ಚರಣದ ಮೊದಲ ವಾರದ ಅತ್ಯುತ್ತಮ ತಂಡ

ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿರುವ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲ ವಾರ ಮುಗಿದಿದ್ದು, ಈ ಸಮಯದಲ್ಲಿ ನಡೆದ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಎಲ್ಲಾ ತಂಡಗಳ ಆಟಗಾರರನ್ನೊಳಗೊಂಡಂತೆ 11 ಆಟಗಾರರಿರುವ ಅತ್ಯುತ್ತಮ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಆಟಗಾರರರೆಂದರೆ: ವೆಂಕಟೇಶ್ ಐಯ್ಯರ್, ರುತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ಶ್ರೇಯಸ್ ಐಯ್ಯರ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ಅನ್ರಿಚ್ ನೋರ್ಕಿಯಾಅತ್ಯುತ್ತಮ ನಾಯಕ ಎಂಎಸ್ ಧೋನಿ ಅಲ್ಲ!

ಹೀಗೆ ಮೊದಲ ವಾರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ದುಕೊಂಡು ರಚಿಸಲಾಗಿರುವ ಅತ್ಯುತ್ತಮ ತಂಡಕ್ಕೆ ರಿಷಭ್ ಪಂತ್ ನಾಯಕನಾಗಿದ್ದಾರೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನವನ್ನು ನೀಡಿದರೂ ಕೂಡ ಎಂ ಎಸ್ ಧೋನಿಗೆ ಈ ಅತ್ಯುತ್ತಮ ತಂಡದಲ್ಲಿ ನಾಯಕ ಸ್ಥಾನ ಸಿಕ್ಕಿಲ್ಲ.ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಯಾರಿಗೂ ಸ್ಥಾನವಿಲ್ಲ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬೌಲರ್ ಹರ್ಷಲ್ ಪಟೇಲ್ ಹ್ಯಾಟ್ರಿಕ್ ವಿಕೆಟ್ ಪಡೆದು ಉತ್ತಮ ಪ್ರದರ್ಶನವನ್ನು ನೀಡಿದ್ದರು. ಆದರೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಯುಎಇ ಚರಣದ ಮೊದಲನೇ ವಾರದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ ಆಟಗಾರರನ್ನೊಳಗೊಂಡ ಅತ್ಯುತ್ತಮ ತಂಡದಲ್ಲಿ ಹರ್ಷಲ್ ಪಟೇಲ್ ಅವರಿಗೆ ಸ್ಥಾನ ಸಿಕ್ಕಿಲ್ಲ.

IPL 2021 best playing 11 from first week of second leg in UAE.