ಫೋಟೊ ಗ್ಯಾಲರಿ

10-09-21 12:19 pm ಫೋಟೊ

ಹೆಡ್‌ಲೈನ್ ಕರ್ನಾಟಕದ ಓದುಗರಿಗೆಲ್ಲ ಗಣೇಶ ಚತುರ್ಥಿಯ ಶುಭಾಶಯಗಳು

ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ..