ಫೋಟೊ ಗ್ಯಾಲರಿ

26-10-20 05:44 pm ಫೋಟೊ

ಮೈಸೂರು ದಸರಾ ಎಷ್ಟೊಂದು ಸುಂದರಾ..!

ಮೈಸೂರಿನಲ್ಲಿ ಈ ಬಾರಿ ವಿಶ್ವವಿಖ್ಯಾತ ದಸರಾ ಉತ್ಸವ ಕೊರೊನಾ ಕಾರಣದಿಂದ ಅತ್ಯಂತ ಸರಳವಾಗಿ ನಡೆದಿದೆ. ಸಿಎಂ ಯಡಿಯೂರಪ್ಪ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದ್ದಾರೆ. ಅರಮನೆ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದ್ದು 300 ಮಂದಿಗೆ ಮಾತ್ರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಎರಡು ಸ್ತಬ್ಧಚಿತ್ರಗಳು, ಐದು ಜನಪದ ಕಲಾತಂಡಗಳು ಮಾತ್ರ ಭಾಗವಹಿಸಿದ್ದವು. ಕೊರೊನಾ ಜಾಗೃತಿಯ ಸ್ತಬ್ಧಚಿತ್ರ ಪ್ರಮುಖ ಆಕರ್ಷಣೆಯಾಗಿತ್ತು.