ಫೋಟೊ ಗ್ಯಾಲರಿ

10-11-20 03:19 pm ಫೋಟೊ

ಮುನಿರತ್ನ ಹ್ಯಾಟ್ರಿಕ್ ಜಯಭೇರಿ, ಶಿರಾದಲ್ಲಿ ಕೊನೆಗೂ ಅರಳಿದ ಕಮಲ !

ಆರ್.ಆರ್. ನಗರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. 25ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಮುನಿರತ್ನ 1,25,665 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸಿನ ಕುಸುಮಾ 67,995 ಮತಗಳನ್ನು ಗಳಿಸಿದ್ದಾರೆ.ತುಮಕೂರಿನ ಶಿರಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ದಾಖಲಿಸಿದ್ದಾರೆ. ಶಿರಾ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು ಹೊಸ ಬೆಳವಣಿಗೆ. ರಾಜೇಶ್ ಗೌಡ 69,559 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 58,190 ಮತಗಳನ್ನು ಗಳಿಸಿದ್ದಾರೆ.