ವಿಡಿಯೋ ಗ್ಯಾಲರಿ

30-09-20 11:58 am ವಿಡಿಯೋ

ಮಾಸ್ಕ್ ಹಾಕದೇ ಹೊರಗೆ ಬಂದರೆ ಹುಷಾರ್‌..! ಇನ್ನು ರೂ. 200 ದಂಡ !

ಕೋವಿಡ್‌-19 ಹರಡುವುದನ್ನು ತಡೆಯಲು ಮಂಗಳೂರು ಮಹಾನಗರ ಪಾಲಿಕೆ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ 200 ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.